ಜನರಿಗೆ ಸೀಲ್ ಡೌನ್ ಸ್ಪಷ್ಠತೆ ಕೊಡಿ : ಹೆಚ್ ಡಿ ಕೆ

ಬೆಂಗಳೂರು

       ಕೊರೊನಾ ವೈರಸ್ ಹೊಡೆತಕ್ಕೆ ಇಡೀ ಜಗತ್ತು ಸಂಕಷ್ಟಕ್ಕೆ ಸಿಲುಕಿದೆ. ನಿಖರ ಚಿಕಿತ್ಸೆ ಇಲ್ಲದ್ದರಿಂದ ಕೋವಿಡ್ 19 ರೋಗ ಹರಡದಂತೆ ತಡೆಯಲು ಲಾಕ್‌ಡೌನ್ ಜಾರಿಗೆ ತರಲಾಗಿದೆ. ಇಡೀ ದೇಶ ಲಾಕ್‌ಡೌನ್‌ನಿಂದ ಸ್ತಬ್ಧವಾಗಿದೆ. ಜನರು ಮುಂದೆನಾಗುತ್ತದೆಯೊ ಎಂಬ ಆತಂಕದಲ್ಲಿದ್ದಾರೆ. ಕೊರೊನಾ ವೂರಸ್ ಎಂಬ ಮಹಾಮಾರಿಯ ಕರಾಳ ಮುಖ ನೋಡಿರುವ ಜನರು ಕೂಡ ಲಾಕ್‌ಡೌನ್ ಜಾರಿಯಲ್ಲಿರಲಿ ಎಂದೆ ಕೇಳುತ್ತಿದ್ದಾರೆ. ದೇಶಾದ್ಯಂತ ಈಗಾಗಲೇ 7,529 ಜನರಲ್ಲಿ ಸೋಂಕು ದೃಢಪಟ್ಟಿದೆ, 242 ಜನರು ಕೊರೊನಾ ರೋಗಕ್ಕೆ ಬಲಿಯಾಗಿದ್ದಾರೆ. ಜೊತೆಗೆ ಸಮಾಧನಕರ ಸಂಗತಿ ಎಂದರೆ 643 ಸೋಂಕಿತರು ಗುಣಮುಖರಾಗಿದ್ದಾರೆ.

       ಸೋಂಕು ಹರಡದಂತೆ ತಡೆಯಲು ಲಾಕ್‌ಡೌನ್‌ ಜೊತೆಗೆ ಸೀಲ್‌ಡೌನ್‌ ಜಾರಿಗೆ ತರಲು ಸರ್ಕಾರ ಮುಂದಾಗಿರುವುದು ಜನರಲ್ಲಿ ಹೊಸ ಆತಂಕ ಸೃಷ್ಟಿಸಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ.

       ಸೀಲ್‌ಡೌನ್‌ಗೆ ಸಂಬಂಧಿಸಿದಂತೆ ಬಗೆಬಗೆಯ ಸುದ್ದಿಗಳು ಹರಿದಾಡುತ್ತಿವೆ. ಜನರಲ್ಲಿ ಭೀತಿ ಆವರಿಸಿದ್ದು, ಸಮೂಹ ಸನ್ನಿಗೆ ಸಿಲುಕಿದ್ದಾರೆ. ಆಹಾರ, ಔಷಧ, ಅಗತ್ಯ ವಸ್ತುಗಳ ಲಭ್ಯತೆ ಬಗ್ಗೆ ಜನರಲ್ಲಿ ಅನುಮಾನಗಳು ಮೂಡಿದ್ದು, ಅವುಗಳ ದಾಸ್ತಾನಿಗೆ ಮುಂದಾಗಿದ್ದಾರೆ. ಇದು ಮತ್ತೊಂದು ಸಮಸ್ಯೆ ಸೃಷ್ಟಿಸುವ ಮುನ್ನ ಸರ್ಕಾರ ಅನುಮಾನಗಳನ್ನು ನೀಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap