ಗೋಡೇಕೆರೆ : ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ ಲಿಂಗೈಕ್ಯ

ತುಮಕೂರು:

     ತುಮಕೂರು ಜಿಲ್ಲೆ ಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹೆಸರಾಂತ ಮಠಗಳಲ್ಲಿ ಒಂದಾದ ಗೋಡೇಕೆರೆ ಸಂಸ್ಥಾನದ ಸ್ಥಿರ ಪಟ್ಟಾಧ್ಯಕ್ಷರಾದ ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ(65) ಇಂದು ಬೆಳಗ್ಗೆ ತೀವ್ರ ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದಾರೆ.

     ಸ್ವಾಮೀಜಿಯವರು ತಿಪಟೂರು ತಾಲ್ಲೂಕಿನ ಕೆ ಬಿ ಕ್ರಾಸ್ ಶಾಖಾ ಮಠದಲ್ಲಿ ರಂಭಾಪುರಿ ವಿದ್ಯಾಸಂಸ್ಥೆಯ ಆಡಳಿತ ನಿರ್ವಹಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಸ್ವಾಮೀಜಿಯವರ ಸಾವಿಗೆ ಅನೇಕ ಗಣ್ಯರು, ಭಕ್ತಾದಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ

    ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಮಠದ ಸ್ಥಿರ ಪಟ್ಟಾಧ್ಯಕ್ಷರಾಗಿದ್ದ ಸಿದ್ದರಾಮದೇಶಿಕೇಂದ್ರ ಸ್ಚಾಮೀಜಿಗಳ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

    ಶ್ರೀಗಳು ಗೋಡೆಕೆರೆ ಶ್ರೀ ಮಠಕ್ಕೆ 9 ನೇ ಗುರುಗಳಾಗಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ಧಾರ್ಮಿಕವಾಗಿ ಸಾಕಷ್ಟು ಕೆಲಸ ಕಾರ್ಯದಲ್ಲಿ ತೊಡಗಿದ್ದರು. ಶ್ರೀ ಮಠದಿಂದ ಶಾಲಾ ಕಾಲೇಜುಗಳು,ವಸತಿ ನಿಲಯ, ಹಾಗೂ ಅನಾಥಾಶ್ರಮಗಳನ್ನು ತೆರೆದು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ನೆರವಾಗಿದ್ದರು.

    ಶ್ರೀಗಳ ಅಕಾಲಿಕ ಅಗಲಿಕೆ ನೋವು ತಂದಿದೆ ಎಂದಿರುವ ಮುಖ್ಯ ಮಂತ್ರಿಗಳು, ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಹಾಗೂ ಅವರ ಅಪಾರ ಭಕ್ತ ವೃಂದಕ್ಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link