JDS ರಾಜ್ಯಾದ್ಯಕ್ಷರ ಕುಟುಂಬಕ್ಕೂ ತಗುಲಿದ ಕೊರೋನಾ ಸೋಂಕು..!

ಹಾಸನ:   ರಾಜ್ಯದ ಪ್ರಬಲ ಪ್ರಾದೇಶಿಕವಾಗಿರುವ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ ಕುಮಾರಸ್ವಾಮಿಯವರ ಪತ್ನಿ ಜಿಲ್ಲಾ ಪಂಚಾಯಿತಿ ಸದಸ್ಯೆ ಚಂಚಲಾ ಕುಮಾರಸ್ವಾಮಿ ಮತ್ತು ಅವರ ಪುತ್ರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ

    ಕಳೆದ ವಾರ ಆಲೂರಿನಲ್ಲಿ ಶಾಸಕರು ಹಾಗೂ ಅವರ ಆಪ್ತ ಸಹಾಯಕ, ಗನ್ ಮ್ಯಾನ್ ಸೇರಿದಂತೆ ಒಟ್ಟು 11 ಜನರ ಗಂಟಲು ದ್ರವ ತೆಗೆದು‌ ಹಾಸನದ ಟೆಸ್ಟಿಂಗ್ ಕೇಂದ್ರಕ್ಕೆ ರವಾನಿಸಲಾಗಿತ್ತು. ಸೋಮವಾರ ಕೊರೊನಾ ಟೆಸ್ಟ್‌ ರಿಪೋರ್ಟ್‌ ಬಂದಿದ್ದು, ಬೆಳಗೋಡು ಜಿಲ್ಲಾ ಪಂಚಾಯತಿ ಕ್ಷೇತ್ರದ ಸದಸ್ಯೆ ಚಂಚಲಾ ಕುಮಾರಸ್ವಾಮಿ ಮತ್ತು ಅವರ ಮಗಳಿಗೂ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಅಲ್ಲದೆ, ಕಾರಿನ ಡ್ರೈವರ್‌ಗೂ ಪಾಸಿಟಿವ್ ವರದಿಯಾಗಿದೆ.

    ಶಾಸಕ ಎಚ್.ಕೆ ಕುಮಾರಸ್ವಾಮಿ ಮಾತನಾಡಿ, ಮೊದಲ ವರದಿಯಲ್ಲಿ ನನಗೆ ಪಾಸಿಟಿವ್ ಕಂಡು ಬಂದಿಲ್ಲ .ಮುನ್ನೆಚ್ಚರಿಕೆಯಾಗಿ ಬೇರೆ ಮನೆಗೆ ಸ್ಥಳಂತರವಾಗಿದ್ದೇನೆ. ಒಂದು ವಾರಗಳ ಕಾಲ ಸಾರ್ವಜನಿಕ ಸಂಪರ್ಕದಿಂದ ದೂರವಿದ್ದು ಹೋಂ ಕ್ವಾರಂಟೈನ್ ನಲ್ಲಿ ಇರಲು ನಿರ್ಧರಿಸಿದ್ದೇನೆ. ಸಾರ್ವಜನಿಕರು ಪಕ್ಷದ ಕಾರ್ಯಕರ್ತರು ಅಗತ್ಯವಿದ್ದಲ್ಲಿ ದೂರವಾಣಿ ಮೂಲಕ ಸಂಪರ್ಕಿಸಲು ಮನವಿ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap