ಚಿತ್ರದುರ್ಗ
ಅಜ್ಜಂಪುರ ಪಟ್ಟಣ ಸಮೀಪ ಹೆಬ್ಬೂರು ಗ್ರಾಮದ ಬಳಿ ಭದ್ರಾ ಮೇಲ್ದಂಡೆ ಕಾಲುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ರೈಲು ಹಳಿ ಕೆಳಗೆ ಬಾಕ್ಸ್ ಅಳವಡಿಕೆ ಕಾಮಗಾರಿ ಸ್ಥಳಕ್ಕೆ ಚಿತ್ರದುರ್ಗ ಸಂಸದ ಎ. ನಾರಾಯಣಸ್ವಾಮಿ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶುಕ್ರವಾರದಂದು ಕಾಮಗಾರಿ ನಡೆಯುವ ವೇಳೆ ಕಾಮಗಾರಿ ಪ್ರದೇಶದಲ್ಲಿ 100 ಅಡಿ ಎತ್ತರದ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದರು. ಈ ದುರ್ಘಟನೆಯಿಂದ ಕೆಲಸ ಮಾಡಲು ಭಯಭೀತರಾಗಿ ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿದ್ದರು. ಹೀಗಾಗಿ ಕಾಮಗಾರಿ ಸ್ಥಳಕ್ಕೆ ಶನಿವಾರ ಭೇಟಿ ನೀಡಿದ ಸಂಸದ ಎ. ನಾರಾಯಣಸ್ವಾಮಿ ಅವರು, ಕಾರ್ಮಿಕರು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರಲ್ಲದೆ, ಭಯಭೀತರಾಗಿದ್ದ ಕಾರ್ಮಿಕರಿಗೆ ಧೈರ್ಯ ತುಂಬಿದರು.
ಹೆಬ್ಬೂರು ಗ್ರಾಮದ ಬಳಿ ರೈಲ್ವೆ ಹಳಿ ಕೆಳಭಾಗ ಹಾದುಹೋಗುವ ಭದ್ರಾ ಮೇಲ್ದಂಡೆ ಕಾಲುವೆ ನಿರ್ಮಾಣ ಕಾಮಗಾರಿ ಆರಂಭವಾಗಿದ್ದು, ರೈಲ್ವೆ ಇಲಾಖೆಯು ರೈಲು ಹಳಿ ಕೆಳಗೆ ಬಾಕ್ಸ್ ಅಳವಡಿಕೆ ಕಾಮಗಾರಿ ನಡೆಸುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ