ಬೆಂಗಳೂರು
ರಾಜ್ಯದಲ್ಲಿ ಕೋರೋನಾ ಸಂಕಷ್ಟ ಮತ್ತು ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ರಾಜಕೀಯ ಪಕ್ಷ ಬೇಧ ಮರೆತು ಎಲ್ಲರೂ ಕೊಡಗಿನ ಹಾನಿಗೆ ಶಾಶ್ವತ ಪರಿಹಾರ ಯೋಜನೆ ರೂಪಿಸಬೇಕು. ರಾಜ್ಯದ ಕಿರೀಟ ಪ್ರಾಯವಾಗಿರುವ ಕೊಡಗು ಜಿಲ್ಲೆಯಲ್ಲಿ ಸಂಭವಿಸುತ್ತಿರುವ ವಿಕೋಪ ಸಂಬಂಧ ಎಲ್ಲಾ ಪಕ್ಷಗಳ ನಾಯಕರು ಒಂದಾಗಿ ಶಾಶ್ವತ ಪರಿಹಾರ ಯೋಜನೆಯನ್ನು ಸಕಾ9ರದ ಮೂಲಕ ಜಾರಿಗೊಳಿಸಬೇಕು ಎಂದರು.
ಜಿಲ್ಲೆಯಲ್ಲಿ ನೆರೆ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸುತ್ತಿರುವ ಡಿ.ಕೆ. ಶಿವಕುಮಾರ್, ಸುದ್ದಿಗಾರರ ಜತೆ ಮಾತನಾಡಿ, ದೇಶಕ್ಕೆ ಅಪ್ರತಿಮ ಸೈನಿಕರನ್ನು ನೀಡಿದ, ಜೀವನದಿ ಕಾವೇರಿಯ ಉಗಮ ಜಿಲ್ಲೆಯ ಹಿತ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಬೇಕು. ಸರ್ಕಾರ ಈ ಕೂಡ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ನಾಡಿಗೆ ಮಳೆ ಅಗತ್ಯ. ಆದರೆ ಮಳೆಯಿಂದ ಉಂಟಾಗುವ ಅನಾಹುತಗಳನ್ನು ತಡೆಗಟ್ಟಲೇಬೇಕಾಗಿದೆ. ಯಾವರೀತಿಯಲ್ಲಿ ಕ್ರಮ ಕೈಗೊಳ್ಳಲು ಸಾಧ್ಯ ಎಂಬ ಕುರಿತು ಸರ್ಕಾರ ಸ್ಪಷ್ಟ ಯೋಜನೆ ರೂಪಿಸಬೇಕು ಎಂದು ಹೇಳಿದರು.
ಕಳೆದ ವರ್ಷ ರಾಜ್ಯದಲ್ಲಿ ಸಂಭವಿಸಿದ ಪ್ರಾಕೃತ್ತಿಕ ವಿಕೋಪ ಸಂತ್ರಸ್ಥರಿಗೇ ಇನ್ನೂ ರಾಜ್ಯ ಸರ್ಕಾರ ಭರವಸೆ ನೀಡಿದ್ದ ಪರಿಹಾರ ಬಿಡುಗಡೆ ಮಾಡಿಲ್ಲ. ಶಾಸಕರು, ಸಂಸದರಿಗೆ ಈ ಬಗ್ಗೆ ಪ್ರಶ್ನಿಸಲೂ ಸಾಧ್ಯವಾಗದ ಅಸಾಹಯಕ ಸ್ಥಿತಿಯಿದೆ. ಮಳೆ ಹಾನಿ ಪರಿಸ್ಥಿತಿ ನಿಭಾಯಿಸುವಲ್ಲಿ ಸರ್ಕಾರ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆರೋಪಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ