ಬೆಂಗಳೂರು
ರಾಜ್ಯದಾದ್ಯಂತ ಮುಂದಿನ ವಾರ ಮಳೆ ಮತ್ತೆ ಅಬ್ಬರಿಸುವ ನಿರೀಕ್ಷೆಯಿದ್ದು, ಈ ಹಿನ್ನೆಲೆಯಲ್ಲಿ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 30 ರಿಂದ ಸೆಪ್ಟೆಂಬರ್ 1 ರ ವರೆಗೆ ಮಳೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್ 1 ಮತ್ತು 2 ರಂದು ವ್ಯಾಪಕ ಮಳೆ ನಿರೀಕ್ಷೆಯಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 2 ಮತ್ತು 3 ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸೆಪ್ಟೆಂಬರ್ 2 ಮತ್ತು 3 ರಂದು ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಲ್ಲಿ ಮುಂದಿನ 48 ಗಂಟೆಗಳ ಕಾಲ, ಸೆಪ್ಟೆಂಬರ್ 1 ರಿಂದ 3 ರ ವರೆಗೆ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ.
ಶಿವಮೊಗ್ಗ, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರದಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಕೂಡ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಂಭವವಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ