ಲಕ್ಷ ಮಂದಿಗೆ ಸೋಂಕು ಬಂದರೂ ನಿಯಂತ್ರಿಸಲು ಸಿದ್ಧ

ದಾವಣಗೆರೆ:

     ರಾಜ್ಯದಲ್ಲಿ ಒಂದು ಲಕ್ಷ ಜನರಿಗೆ ಕೊರೊನಾ ಸೋಂಕು ಹರಡಿದರೂ ಅದನ್ನು ನಿಯಂತ್ರಿಸಲು ಸರ್ಕಾರ ಸಜ್ಜಾಗಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

    ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ 258 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 65 ಜನರು ಗುಣಮುಖರಾಗಿದ್ದಾರೆ. 1 ಲಕ್ಷ ಪಾಸಿಟಿವ್ ಪ್ರಕರಣ ಬಂದರೂ ನಿಭಾಯಿಸುವ ಶಕ್ತಿ ಸರ್ಕಾರಕ್ಕೆ ಇದೆ ಎಂದರು.

    ಕೊರೊನಾ ಸೋಂಕು ನಿಯಂತ್ರಣಕ್ಕಾಗಿ 1 ಸಾವಿರ ಐಸಿಯು ಬೆಡ್, 6 ಸಾವಿರ ಐಸೋಲೇಷನ್ ವಾರ್ಡ್ ತೆರೆಯಲಾಗಿದೆ. ಸೋಂಕು ನಿರ್ಮೂಲನೆಗೆ ಒತ್ತು ನೀಡಲಾಗಿದೆ. ವೆಂಟಿಲೇಟರ್‍ಗಳ ಖರೀದಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಇನ್ನು 2 ದಿನದಲ್ಲೇ ಕೊರೋನಾ ಟೆಸ್ಟಿಂಗ್ ಲ್ಯಾಬ್ ದಾವಣಗೆರೆಯಲ್ಲೇ ಸ್ಥಾಪನೆಯಾಗಲಿದೆ. ಖಾಸಗಿ, ಸರ್ಕಾರಿ ಆಸ್ಪತ್ರೆಗಳಿಗೆ ಟೆಸ್ಟಿಂಗ್ ಕಿಟ್ ನೀಡಲು ಐಸಿಎಂಆರ್ ಜೊತೆಗೆ ಚರ್ಚಿಸಿದ್ದೇನೆ ಎಂದು ಹೇಳಿದರು.

    ಓರ್ವ ಮಹಿಳೆ ಸೇರಿದಂತೆ ದಾವಣಗೆರೆ, ಚಿತ್ರದುರ್ಗದ ಮೂವರಲ್ಲಿ ಕೊರೊನಾ ಸೋಂಕು ದೃಢಪಟ್ಟಾಗ ಜನರಲ್ಲಿ ಆತಂಕ ಸೃಷ್ಟಿಯಾಗಿತ್ತು. ಉತ್ತಮ ಚಿಕಿತ್ಸೆ, ಆರೈಕೆಯಿಂದ ಮೂವರೂ ಗುಣಮುಖರಾಗಿ ಮನೆಗೆ ಮರಳಿದ್ದು, ಜನರಲ್ಲಿ ಆತ್ಮವಿಶ್ವಾಸ ಮೂಡಿಸಿದೆ ಎಂದ ಅವರು, ಕೊರೋನಾ ವೈರಸ್ ಹರಡದಂತೆ ತಡೆಯುವಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡ ದಾವಣಗೆರೆ ಜಿಲ್ಲಾಡಳಿತಕ್ಕೆ ಸರ್ಕಾರದಿಂದ ಅಭಿನಂದಿಸಲಾಗಿದೆ ಎಂದರು.

    ದೇವರ ದಯೆಯಿಂದ ರಾಷ್ಟ್ರ ಮಟ್ಟದಲ್ಲಿ 3ನೇ ಸ್ಥಾನದಲ್ಲಿದ್ದ ವೈರಾಣು ಕರ್ನಾಟಕ 12ನೇ ಸ್ಥಾನಕ್ಕಿಳಿದಿದ್ದು, ಈ ಮೂಲಕ ಕೊರೋನಾ ವೈರಸ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಬಗ್ಗೆ ಕೇಂದ್ರವೂ ಶ್ಲಾಘಿಸಿದೆ. ಸೂರ್ಯನ ಕಿರಣ ಹೆಚ್ಚು ಬೀಳುವ ಪ್ರದೇಶದಲ್ಲಿ ಸೋಂಕು ಹೆಚ್ಚು ಪ್ರಮಾಣದಲ್ಲಿ ಕಂಡು ಬಂದಿಲ್ಲ. ಜನರ ಪ್ರಾಣ ಉಳಿಸಲು ನಾವು ಸದಾ ಸಿದ್ಧರಿದ್ದೇವೆ. ಜನರೂ ಸಹ ಯಾರೂ ಹೊರಗೆ ಬರಬಾರದು. ಲಾಕ್ ಡೌನ್, ನಿಷೇಧಾಜ್ಞೆ, ಕಪ್ರ್ಯೂ ಆದೇಶವನ್ನು ತಪ್ಪದೇ ಪಾಲಿಸಬೇಕು ಎಂದು ಅವರು ಮನವಿ ಮಾಡಿದರು.

      ಜಿಲ್ಲಾಧಿಕಾರಿ ಮಹಾಂತೇಶ ಜಿ.ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಟ ಹನುಮಂತರಾಯ, ಜಿಪಂ ಸಿಇಓ ಪದ್ಮಾ ಬಸವಂತಪ್ಪ, ಡಿಎಚ್‍ಓ ಡಾ.ರಾಘವೇಂದ್ರ ಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಿ.ಡಿ.ರಾಘವನ್, ಕೋವಿಡ್-19 ನೋಡಲ್ ಅಧಿಕಾರಿ ಪ್ರಮೋದ ನಾಯಕ ಮತ್ತಿತರರು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link