ಯುವ ಜನತೆ ಆಧುನಿಕತೆಯ ಸರಕು, ಸಂಸ್ಕೃತಿಗೆ ಒಳಗಾಗಬಾರದು

ಶಿರಾ

      ಗ್ರಾಮೀಣ ಯುವ ಜನತೆ ಆಧುನಿಕತೆಯ ಸರಕು, ಸಂಸ್ಕೃತಿಯ ಆಕರ್ಷಣೆಗೆ ಒಳಗಾಗಿ ದುಶ್ಚಟಗಳ ದಾಸರಾಗುತ್ತಾ ತಮ್ಮ ಅಮೂಲ್ಯ ಆರೋಗ್ಯ ಮತ್ತು ಆಯುಷ್ಯವನ್ನು ಕಳೆದುಕೊಳ್ಳುತ್ತಿರುವ ಕುರಿತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಆರ್. ವೇಣುಗೋಪಾಲ್ ಕಳವಳ ವ್ಯಕ್ತಪಡಿಸಿದರು.

       ಅವರು ಸಿರಾ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕಲಾ, ವಿಜ್ಞಾನ ಮತ್ತು ವಾಣಿಜ್ಯ, ಸಿರಾ, ಇವರು ಆಯೋಜಿಸಿದ್ದ “ಯುವ ರೆಡ್ ಕ್ರಾಸ್ ಮತ್ತು ರೆಡ್ ರಿಬ್ಬನ್ ಘಟಕ” ಗಳ ವತಿಯಿಂದ “ಆರೋಗ್ಯ ಅರಿವು ಕಾರ್ಯಕ್ರಮ” ದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಸಿರಾ ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ಶಿಕ್ಷಣಾಧಿಕಾರಿ ಹಾಗೂ ಆಹಾರ ಸಂರಕ್ಷಣಾಧಿಕಾರಿ ಚಂದ್ರಪ್ಪ, ವಿದ್ಯಾರ್ಥಿಗಳಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕುರಿತು ವಿವರಿಸುತ್ತಾ ಮಾದಕ ವಸ್ತುಗಳು, ಮದ್ಯ ವ್ಯಸನ, ಹೆಚ್1 ಎನ್1 ಕಾಯಿಲೆಯ ಲಕ್ಷಣ, ಚಿಕಿತ್ಸೆ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

       ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಾರ್ವಜನಿಕ ಆಸ್ಪತ್ರೆಯ ಐಸಿಟಿಸಿ ಕೌನ್ಸಿಲರ್ ಮಧು ಮಾತನಾಡಿ, ವಿದ್ಯಾರ್ಥಿಗಳಿಗೆ ಮಾರಣಾಂತಿಕ ಕಾಯಿಲೆಗಳಾದ ಹೆಚ್.ಐ.ವಿ., ಏಡ್ಸ್ ಬಗ್ಗೆ ಜಾಗೃತಿ ಅಗತ್ಯ. ಮಾರಕ ಕಾಯಿಲೆಗಳಿಂದ ದೂರವಿರಲು ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು ಎಂದರು.

       ಶ್ರೀರಾಮ್ ಮಾತನಾಡಿ, ‘ಆಯುಷ್ಮಾನ್ ಭಾರತ – ಆರೋಗ್ಯ ಕರ್ನಾಟಕ’ ವಿಮಾ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಸಂಚಾಲಕರಾದ ಧರಣೇಂದ್ರ ಕುಮಾರಿ ಪ್ರಾಸ್ತಾವಿಕನುಡಿ ಗಳನ್ನಾಡಿದರು.

       ಲತಾ.ಸಿ.ವಿ., ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರು ಸ್ವಾಗತಿಸಿದರು, ಸುಷ್ಮಾ.ಡಿ., ಆಂಗ್ಲಭಾಷಾ ಸಹಾಯಕ ಪ್ರಾಧ್ಯಾಪಕರು ವಂದಿಸಿದರು, ಸುಕನ್ಯ.ಟಿ.ಎಲ್. ಕನ್ನಡ ಸಹಾಯಕ ಪ್ರಾಧ್ಯಾಪಕರು, ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link