ನೀರಿಗಾಗಿ ಖಾಲಿ ಕೊಡ ಹಿಡಿದು ಮಹಿಳೆಯರ ಪ್ರತಿಭಟನೆ

ಗುಬ್ಬಿ

    ಕಳೆದ ನಾಲ್ಕು ತಿಂಗಳುಗಳಿಂದ ತಾಲ್ಲೂಕಿನ ಕಡಬ ಹೋಬಳಿ ಪೆದ್ದನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಲವಾರು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವೃಗೊಂಡಿದ್ದು ಜನ ಜಾನುವಾರುಗಳಿಗೆ ಕುಡಿಯುವ ನೀರಿಲ್ಲದೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಕೂಡಲೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ತೀವೃ ಸ್ವರೂಪದ ಹೋರಾಟ ಮಾಡುವುದಾಗಿ ಪ್ರತಿಭಟನಾ ನಿರತ ಗ್ರಾಮಸ್ಥರು ಎಚ್ಚರಿಕೆ ನೀಡಿದರು.

     ದಿನೆ ದಿನೆ ಬಿಸಿಲ ಬೇಗೆ ಹೆಚ್ಚುತ್ತಿದ್ದು ಕಳೆದ ಹಲವು ತಿಂಗಳುಗಳಿಂದಲೂ ಈ ಭಾಗದ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವೃಗೊಂಡಿದೆ ಸಂಬಂದಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೆ ಪ್ರಯೋಜನವಾಗಿಲ್ಲ ಗ್ರಾಮೀಣ ಜನತೆ ಕುಡಿಯುವ ನೀರಿಗಾಗಿ ಕೊಡ ಹಿಡಿದು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು ತ್ವರಿತವಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಪ್ರತಿಭಟನಾ ನಿರತ ಗ್ರಾಮಸ್ಥರು ಒತ್ತಾಯಿಸಿದರು.

    ಖಾಲಿ ಕೊಡ ಹಿಡಿದು ನೀರಿಗಾಗಿ ಹಗಲಿರುಳೆನ್ನದೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸುವವರೆಗೂ ಪ್ರತಿಭಟನೆಯನ್ನು ಕೈಬಿಡುವುದಿಲ್ಲ ಎಂದು ಪ್ರತಿಭಟನಾ ನಿರತ ಮಹಿಳೆಯರು ಎಚ್ಚರಿಕೆ ನೀಡಿದರು.

     ಪ್ರತಿಭಟನಾಕಾರನ್ನುದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯ್ತಿ ಸದಸ್ಯ ಹರಪ್ರಸಾದ್ ಪೆದ್ದನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮೆಳೆಕಲ್ಲಹಳ್ಳಿ, ಮಂಚಿಹಳ್ಳಿ, ಕುಣಾಘಟ್ಟ, ದೇವರಹಟ್ಟಿ, ಕೆ.ಮತ್ತಿಘಟ್ಟ ಕಾಲೋನಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಕಳೆದ ನಾಲ್ಕು ತಿಂಗಳಿನಿಂದಲೂ ಕುಡಿಯುವ ನೀರಿನ ಸಮಸ್ಯೆ ತೀವೃಗೊಂಡಿದ್ದು ಕುಡಿಯುವ ನೀರಿಗಾಗಿ ಗ್ರಾಮದ ಮಹಿಳೆಯರು ಮತ್ತು ಮಕ್ಕಳು ಹಗಲು ರಾತ್ರಿ ಎನ್ನದೆ ಪಕ್ಕದ ಗ್ರಾಮಗಳ ರೈತರ ತೋಟಗಳಿಗೆ ಹೋಗಿ ನೀರು ತರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

     ತ್ವರಿತವಾಗಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು ಅಲ್ಲದೆ ಕುಡಿಯುವ ನೀರಿಗೆ ಕೊಳವೆ ಭಾವಿ ಕೊರೆಸಬೇಕು ಮುಚ್ಚಿರುವ ಶುದ್ದ ನೀರಿನ ಘಟಕವನ್ನು ಚಾಲನೆ ಮಾಡಿಸಬೇಕು ಎಂದು ಒತ್ತಾಯಿಸಿದ ಅವರು ದನಕರುಗಳ ಕುಡಿಯುವ ನೀರಿಗಾಗಿ ತಕ್ಷಣವೇ ಜಾನುವಾರು ತೊಟ್ಟಿಗಳಿಗೆ ನೀರನ್ನು ಒದಗಿಸಬೇಕು, ಜಾನುವಾರುಗಳಿಗೆ ಮೇವು ಬ್ಯಾಂಕ್ ತೆರೆಯಬೇಕು ಎಂದು ಒತ್ತಾಯಿಸಿದರು.

     ಗ್ರಾಮ ಪಂಚಾಯತಿ ಅಧಿಕಾರಿ ನಮಗೆ ಸ್ಪಂಧಿಸುತ್ತಿಲ್ಲ ಸಮಸ್ಯೆ ಬಗ್ಗೆ ಕೇಳಿದರೆ ಚುನಾವಣೆ ನೀತಿ ಸಂಹಿತೆ ನೆಪ ಹೇಳುತ್ತಾರೆ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಲು ನೀತಿ ಸಂಹಿತೆ ಬರುವುದಿಲ್ಲ ಆದರೆ ಇಲ್ಲಿನ ಅಧಿಕಾರಿಗಳು ಇಲ್ಲ ಸಲ್ಲದ ಸಬೂಬು ಹೇಳೆಕೊಂಡು ಕಾಲಹರಣ ಮಾಡುತ್ತಿದ್ದಾರೆ ಇದರಿಂದ ಗ್ರಾಮೀಣ ಜನತೆ ಕುಡಿಯುವ ನೀರಿಗಾಗಿ ಇನ್ನಿಲ್ಲದ ಪರದಾಟ ನಡೆಸುವಂತಹ ಸ್ಥಿತಿ ಎದುರಾಗಿದೆ ಕೂಡಲೆ ಸಮಸ್ಯೆ ಬಗೆಹರಿಸದಿದ್ದರೆ ನಿರಂತರವಾಗಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

    ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ನರಸಿಂಹಯ್ಯ ಮತ್ತು ಎಇಇ ಹೆಚ್.ಆರ್.ರಮೇಶ್ ಪ್ರತಿಭಟನಕಾರರೊಂದಿಗೆ ಮಾತನಾಡಿ 15 ದಿನದಲ್ಲಿ ನಿಮ್ಮೂರಿನ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಲಾಗುತ್ತದೆ ಅಲ್ಲಿವರೆಗೂ ಗ್ರಾಮಕ್ಕೆ ಪ್ರತಿದಿನ 8 ಟ್ರಿಪ್‍ನಂತೆ ಟ್ಯಾಂಕರ್ ಮೂಲಕ ಗ್ರಾಮಗಳಿಗೆ ಕುಡಿಯುವ ನೀರನ್ನು ಬಿಡುವ ವ್ಯವಸ್ಥೆ ಮಾಡಲಾಗುತ್ತದೆ ಪ್ರತಿ ಬೀದಿಯವರು ಅನುಸರಿಸಿಕೊಂಡು ನೀರು ಪಡೆಯಬೇಕು ಶುದ್ದವಾದ ನೀರನ್ನೆ ಒದಗಿಸಲಾಗುತ್ತದೆ ಹಾಗೂ ನೀರನ್ನು ಟ್ಯಾಂಕರ್‍ನಲ್ಲಿ ನೀರು ಸರಬರಾಜು ಮಾಡುವವರು ಹೆದರುವ ಅವಶ್ಯಕತೆ ಇಲ್ಲ ಅವರಿಗೆ ತಹಶೀಲ್ದಾರ್ ಮುಖಾಂತರ ಹಣ ಬರುತ್ತದೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.

    ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳ ನೂರಾರು ಗ್ರಾಮಸ್ಥರು, ಮಹಿಳೆಯರು ಖಾಲಿ ಕೊಡದೊಂದಿಗೆ ಪ್ರತಿಭನೆಯಲ್ಲಿ ಭಾಗವಹಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link