ಕುಮಾರ ಸ್ವಾಮಿಗೆ ಒಲಿದ ಸಚಿವ ಸ್ಥಾನ!?

ಬೆಂಗಳೂರು :  

         ಜೆಡಿಎಸ್ ಪಕ್ಷದಲ್ಲಿ ಭಿನ್ನಮತ ಹುಟ್ಟಿಗೆ ಅವಕಾಶ ನೀಡದೆ ಸಚಿವ ಸಂಪುಟ ವಿಸ್ತರಣೆ ವೇಳೆ ಖಾಲಿ ಇರುವ ಎರಡು ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಜೆಡಿಎಸ್‌ ಪಾಳೆಯದಲ್ಲಿ ಕಸರತ್ತು ನಡೆಯುತ್ತಿದ್ದು, ಮುಸ್ಲಿಂ ಮತ್ತು ದಲಿತ ಕೋಟಾದಲ್ಲಿ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷದ ವರಿಷ್ಠರು ಗಂಭೀರವಾಗಿ ಚಿಂತನೆ ನಡೆಸಿದ್ದಾರೆ.

        ಆರ್ಥಿಕ ಸಂಕಷ್ಟದಲ್ಲಿ ಪಕ್ಷಕ್ಕೆ ಅಪದ್ಬಾಂಧವ ಮತ್ತು ಸಂಪನ್ಮೂಲ ವ್ಯಕ್ತಿಯಾಗಿರುವ ವಿಧಾನಪರಿಷತ್‌ ಸದಸ್ಯ ಬಿ.ಎಂ.ಫಾರೂಕ್‌ಗೆ ಎರಡನೇ ಹಂತದ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ನೀಡುವ ಸಾಧ್ಯತೆ ಹೆಚ್ಚಿದೆ. ಬಿಎಸ್‌ಪಿ ಶಾಸಕ ಎನ್‌.ಮಹೇಶ್‌ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ದಲಿತ ಕೋಟಾದಲ್ಲಿ ಶಾಸಕ ಎಚ್‌.ಕೆ.ಕುಮಾರಸ್ವಾಮಿ ಅವರಿಗೆ ಸಚಿವ ಸ್ಥಾನ ಭಾಗ್ಯ ಒಲಿದು ಬರುವ ಸಂಭವ ಇದೆ ಎಂದು ತಿಳಿದು ಬಂದಿದೆ.

          ಆದರೆ, ಹಂಗಾಮಿ ಸಭಾಪತಿಯಾಗಿರುವ ಹಿರಿಯ ನಾಯಕ ಬಸವರಾಜ ಹೊರಟ್ಟಿಸಹ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಅವರಿಗೆ ಸ್ಥಾನ ಸಿಗುವ ಸಾಧ್ಯತೆ ಕ್ಷೀಣಿಸುತ್ತಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

          ಜೆಡಿಎಸ್‌ ಪಾಳೆಯದಲ್ಲಿ ಮುಸ್ಲಿಂ ಸಮುದಾಯದ ಯಾವೊಬ್ಬ ಶಾಸಕರೂ ಆಯ್ಕೆಯಾಗಿಲ್ಲ. ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಫಾರೂಕ್‌ ಅವರನ್ನು ಸೋಲಿಸಲಾಯಿತು. ಪಕ್ಷದ ಸಂಪನ್ಮೂಲ ವ್ಯಕ್ತಿಯಾಗಿರುವ ಕಾರಣ ಅವರಿಗೆ ಮನ್ನಣೆ ನೀಡಲು ವಿಧಾನಪರಿಷತ್‌ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು. ಮೈತ್ರಿ ಸರ್ಕಾರದಲ್ಲಿ ಜೆಡಿಎಸ್‌ಗೆ ಸಿಕ್ಕಿರುವ ಸ್ಥಾನಗಳ ಪೈಕಿ ಸದ್ಯಕ್ಕೆ ಎರಡು ಖಾಲಿ ಇದ್ದು, ಒಂದು ಸ್ಥಾನವನ್ನು ಫಾರೂಕ್‌ಗೆ ನೀಡಲು ಈಗಾಗಲೇ ಪಕ್ಷದ ವರಿಷ್ಠರು ನಿರ್ಧರಿಸಿದ್ದಾರೆ. ಹೀಗಾಗಿ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಮುಸ್ಲಿಂ ಕೋಟಾದಡಿ ಫಾರೂಕ್‌ಗೆ ಸ್ಥಾನ ನೀಡುವುದು ಬಹುತೇಕ ಖಚಿತ ಎಂದು ಪಕ್ಷದ ಮೂಲಗಳು ಸ್ಪಷ್ಟಪಡಿಸಿವೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap