ಬೆಂಗಳೂರು
ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ 19 ನೇ ವಾರ್ಷಿಕ ಅಂತರ ಕಾಲೇಜು ಅಥ್ಲೆಟಿಕ್ ಸ್ಪರ್ಧೆಗಳನ್ನು ಈ ಬಾರಿ ದಾವಣಗೆರೆಯ ಜೆಜೆಎಂ ಮೆಡಿಕಲ್ ಕಾಲೇಜಿನ ಆಶ್ರಯದಲ್ಲಿ ನಾಳೆಯಿಂದ ನವೆಂಬರ್ 14 ರ ವರೆಗೆ ಹಮ್ಮಿಕೊಳ್ಳಲಾಗಿದೆ.
ನಾಳೆ ಸಂಜೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿವಿಯ ಕುಲಪತಿ ಡಾ.ಎಸ್.ಸಚ್ಚಿದಾನಂದ ಕ್ರೀಡಾಕೂಟ ಉದ್ಘಾಟಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಜೆಎಂ ಮೆಡಿಕಲ್ ಕಾಲೇಜಿನ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ವಹಿಸಲಿದ್ದಾರೆ.
ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ಬಿ.ಮುರುಗೇಶ್, ಕುಲಸಚಿವ ಡಾ.ವಸಂತ ಶೆಟ್ಟಿ ಬಿ. ಸೆನೆಟ್ ಸದಸ್ಯ ಡಾ.ರವೀಂದ್ರ ಬಣಕಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ದೇಶದ 65 ವೈದ್ಯಕೀಯ ಕಾಲೇಜುಗಳ ಸುಮಾರು 800 ಕ್ಕೂ ಅಧಿಕ ಕ್ರೀಡಾಪಟುಗಳು ಕೂಟದಲ್ಲಿ ಭಾಗವಹಿಸಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
