ಬೆಂಗಳೂರು
ದೇಶದ ಶೇಕಡ 65ರಷ್ಟು ಜನರು ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ, ಉದ್ಯೋಗ ಹುಡುಕಿಕೊಂಡು ನಗರ, ಪಟ್ಟಣ ಪ್ರದೇಶಗಳಿಗೆ ವಲಸೆ ಬರುವುದರ ಬದಲು ಗ್ರಾಮೀಣ ಪ್ರದೇಶಗಳಲ್ಲಿಯೇ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ರಾಜ್ಯಪಾಲ ವಜೂಭಾಯಿ ವಾಲಾ ಕರೆ ನೀಡಿದ್ದಾರೆ.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ 4 ದಿನಗಳ ಕಾಲ ರಾಷ್ಟ್ರೀಯ ಕೃಷಿಮೇಳಕ್ಕೆ ಚಾಲನೆ ನೀಡಿ, ನೂತನ ತಳಿಗಳ ಬಿಡುಗಡೆ ಮಾಡಿದರು. ನಂತರ ಅನ್ನದಾತರಿಗೆ ರೈತ ಪ್ರಶಸ್ತಿ ನೀಡಿ ಸನ್ಮಾನಿಸಿ ಮಾತನಾಡಿದ ಅವರು, ಕೃಷಿ ಕಾರ್ಯಗಳಲ್ಲಿ ನೀರಿನ ಪೆಲಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅವರು ತಿಳಿಸಿದರು.
ಕೃಷಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ಮಾತನಾಡಿ, ರೈತರು ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು, ಸಾವಯವ ಸಿರಿಧಾನ್ಯಗಳ ಕೃಷಿಗೆ ಮಹತ್ವ ನೀಡಬೇಕು, ಶೂನ್ಯ ಬಂಡವಾಳ ಕೃಷಿಯಲ್ಲಿ ತೊಡಗಿಕೊಳ್ಳಬೇಕು ಎಂದು ಹೇಳಿದರು.
ಕೃಷಿಮೇಳದಲ್ಲಿ 250ಕ್ಕೂ ಹೆಚ್ಚು ಮಳಿಗೆಗಳಲ್ಲಿ ವಿವಿಧ ಬೆಳೆಗಳ ತಳಿಗಳು ಮತ್ತು ಸುಧಾರಿತ ಯಂತ್ರೋಪಕರಣಗಳ ಪ್ರದರ್ಶನವಿರುತ್ತದೆ. ಸುಧಾರಿತ ಒಣ ಬೇಸಾಯ ಕ್ರಮ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮೇಳದಲ್ಲಿ ಮಾಹಿತಿ ದೊರೆಯಲಿದೆ.
ಇದೇ ಸಂದರ್ಭದಲ್ಲಿ ರಾಜ್ಯಪಾಲರು ಡಾ. ಎಂ.ಹೆಚ್. ಮರಿಗೌಡ ರಾಜ್ಯಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿಯನ್ನು ಉತ್ತರ ಕನ್ನಡ ಜಿಲ್ಲೆಯ ಪ್ರಸಾದರಾಮ ಹೆಗಡೆ, ಕೆನರಾ ಬ್ಯಾಂಕ್ ಪ್ರಾಯೋಜಿತ ಕ್ಯಾನ್ ಬ್ಯಾಂಕ್ ಅತ್ಯುತ್ತಮ ರೈತ ಪ್ರಶಸ್ತಿಯನ್ನು ಎಂ.ಎನ್. ಕೋಲಾರದ ರವಿಶಂಕರ್ ಅವರಿಗೆ ನೀಡಿ ಗೌರವಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ