ಬೆಂಗಳೂರು
ಅನಾರೋಗ್ಯದಿಂದ ಬಳಲುತ್ತಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್‍ಕುಮಾರ್ ಅವರ ಯೋಗಕ್ಷೇಮವನ್ನು ವಿಚಾರಿಸಲು ಕಂದಾಯ & ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆಯವರು ಇಂದು ನಗರದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಈ ಸಂದರ್ಭದಲ್ಲಿ ಅನಂತ್‍ಕುಮಾರ್ ಅವರ ಕುಟುಂಬ ಸದಸ್ಯರೊಂದಿಗೆ ಮಾತನಾಡಿ, ಅವರ ಆರೋಗ್ಯವನ್ನು ವಿಚಾರಿಸಿದ ಸಚಿವರು, “ಅನಂತ್‍ಕುಮಾರ್ ಅವರು ಶೀಘ್ರವಾಗಿ ಗುಣಮುಖರಾಗಲಿ” ಎಂದು ಹಾರೈಸಿದರು.
ಇದೇ ವೇಳೆಯಲ್ಲಿ, ಆಸ್ಪತ್ರೆಯ ಮುಖ್ಯಸ್ಥ ಮತ್ತು ಹೆಸರಾಂತ ವೈದ್ಯರಾದ ಡಾ.ಶ್ರೀನಾಥ್ ಅವರೊಂದಿಗೂ ಮಾತನಾಡಿದ ದೇಶಪಾಂಡೆ, ಕೇಂದ್ರ ಸಚಿವರ ಆರೋಗ್ಯದ ಸ್ಥಿತಿಗತಿ ಬಗ್ಗೆ ವಿವರ ಪಡೆದುಕೊಂಡರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








