ಬೆಂಗಳೂರು
ಬಿಬಿಎಂಪಿ ಆಸ್ತಿ ತೆರಿಗೆ ಬಾಕಿ ಇರಿಸಿಕೊಂಡಿರುವವರ ವಿರುದ್ಧ ಚಾಟಿ ಬೀಸಲು ಬಿಬಿಎಂಪಿ ಮುಂದಾಗಿದೆ. ಮುಂದಿನ ವರ್ಷದ ಮಾರ್ಚ್ ಒಳಗೆ ಎಲ್ಲಾ ಆಸ್ತಿ ತೆರಿಗೆದಾರರು ಬಾಕಿ ಪಾವತಿಸಬೇಕು ಎಂದು ಉಪಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ್
ನಗರದಲ್ಲಿಂದು ಸುದ್ದಿಗಾರರ ಜತೆ ಮಾತನಾಡಿದ ಅವರು, ಆಸ್ತಿ ತೆರಿಗೆ ಬಾಕಿ ಪಾವತಿದಾರರು ಮಾರ್ಚ್ ತಿಂಗಳ ಒಳಗೆ ಪಾವತಿಸುವಂತೆ ಸೂಚಿಸಲಾಗಿದೆ. ಬಾಕಿ ಇರುವ ಆಸ್ತಿ ತೆರಿಗೆಯನ್ನು ಮಾರ್ಚ್ ಒಳಗೆ ಸಂಗ್ರಹಿಸುವಂತೆ ಅಧಿಕಾರಿಗಳಿಗೂ ಸೂಚಿಸಿದ್ದೇವೆ ಎಂದು ತಿಳಿಸಿದರು.
ಈ ಆರ್ಥಿಕ ವರ್ಷದಲ್ಲಿ 3 ಸಾವಿರ ಕೋಟಿ ರೂಪಾಯಿ ಆಸ್ತಿ ತೆರಿಗೆಯಲ್ಲಿ 2031 ಕೋಟಿ ರೂ.ಸಂಗ್ರಹವಾಗಿದೆ. ಇನ್ನು ಬಾಕಿ ಇರುವ ತೆರಿಗೆಯನ್ನು ಶೀಘ್ರ ಸಂಗ್ರಹಿಸುವಂತೆ ಸೂಚಿಸಲಾಗಿದೆ. ಮಾರ್ಚ್ ಒಳಗೆ ಎಲ್ಲಾ ತೆರಿಗೆ ಸಂಗ್ರಹವಾಗಬೇಕು ಎಂಬ ಗುರಿ ನೀಡಲಾಗಿದೆ ಎಂದರು.
ಹಿಂದಿನ ಬಾಕಿ 2 ಸಾವಿರ ಕೋಟಿ ರೂ. ಇದ್ದು, ಅದರಲ್ಲಿ 350 ಕೋಟಿ ಸಂಗ್ರಹವಾಗಿದೆ ಎಂದು ಪ್ರಶ್ನೆಯೊಂದಕ್ಕೆ ಪುನರುತ್ತರಿಸಿದರು. ರೈತರ ಹಿತ ಕಾಪಾಡುವುದು ಸಮ್ಮಿಶ್ರ ಸರ್ಕಾರದ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ನವು ಕೆಲಸ ಮಾಡುತ್ತಿದ್ದೇವೆ. ಬಿಜೆಪಿ ಅವರಿಂದ ರೈತರ ಬಗ್ಗೆ ಪಾಠ ಕಲಿಯಬೇಕಿಲ್ಲ. ಹಸಿರು ಕ್ರಾಂತಿ ನೀತಿ ದೇಶದಲ್ಲಿ ಜಾರಿಗೆ ತಂದಿದ್ದೇ ಕಾಂಗ್ರೆಸ್ ಎಂದು ಬಿಜೆಪಿಗೆ ತಿರುಗೇಟು ನೀಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ