ದೈಹಿಕವಾಗಿ ಸಧೃಡರಾಗಲು ರಾಮಲಿಂಗಾ ರೆಡ್ಡಿ ಕರೆ…!!!

ಬೆಂಗಳೂರು

       ಕ್ರೀಡೆಗಳಲ್ಲಿ ತೊಡಗದ ವಿದ್ಯಾರ್ಥಿಗಳು ದೈಹಿಕ ಸದೃಡತೆ ಹೊಂದಲು ಸಾಧ್ಯವಿಲ್ಲ ಎಂದು ಶಾಸಕ ಹಾಗೂ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ನಾರಾಯಣ ಶಿಕ್ಷಣ ಸಂಸ್ಥೆಯ ಕೇಲೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡರೆ ಮಾನಸಿಕವಾಗಿ ದೈಹಿಕವಾಗಿ ಸದೃಡರಾಗಲು ಸಾಧ್ಯ ಎಂದರು.

      ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಲು ಇತ್ತೀಚಿನ ದಿನಗಳಲ್ಲಿ ಉತ್ತಮ ಸೌಲಭ್ಯಗಳು ದೊರೆಯುತ್ತವೆ ಖಾಸಗಿ ಶಿಕ್ಷಣ ಸಂಸ್ಥೆಗಳು ಕೂಡ ಕ್ರೀಡೆಗಳಿಗೆ ಹೆಚ್ಚಿನ ಮಹತ್ವ ನೀಡುತ್ತಿವೆ ಎಂದು ಎಂದು ಹೇಳಿದರು.

       ನಾರಾಯಣ ಶಿಕ್ಷಣ ಸಂಸ್ಥೆಯು ಮೊದಲಿನಿಂದಲೂ ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಉತ್ತಮ ಕ್ರೀಡಾ ಸೌಲಭ್ಯಗಳನ್ನು ಕಲ್ಪಿಸಿ ಕ್ರೀಡೆಗಳಿಗೆ ಪ್ರಾಮುಖ್ಯತೆಯನ್ನು ನೀಡುತ್ತಾ ಬಂದಿದೆ ಎಂದರು.
ನಾರಾಯಣ ಶಿಕ್ಷಣ ಸಂಸ್ಥೆಯುಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ರಾಷ್ಟ್ರೀಯ,ಅಂತರಾಷ್ಟ್ರೀಯ ಕ್ರೀಡಾ ಕೂಟಗಳಲ್ಲಿ ಹೆಸರು ಮಾಡುತ್ತಿದ್ದು ವಿದ್ಯಾರ್ಥಿಗಳ ದೈಹಿಕ ಸದೃಡತೆಯನ್ನು ಹೆಚ್ಚಿಸಲು ಪ್ರತಿ ವರ್ಷವೂ ಕೇಲೋತ್ಸವವನ್ನು ಆಚರಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.

       ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕಿ ಸೌಮ್ಯ ರೆಡ್ಡಿ ಕ್ರೀಡೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ತೊಡಗಲು ಕೇಲೋತ್ಸವ ನಡೆಸಿ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.ಮೇಯರ್ ಗಂಗಾಂಭಿಕೆ ಮಲ್ಲಿಕಾರ್ಜುನ ರಾಷ್ಟ್ರೀಯ ಬಾಸ್ಕೆಟ್ ಬಾಲ್ ತಂಡದ ನಾಯಕ ಸಂಜಯ್‍ರಾಜ್ ಪ್ಯಾರಒಲಂಪಿಯನ್ ಸಿಮ್ಮರ್ ಶರತ್ ಗಾಯಕ್ವಾಡ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಡಾ.ಸಿಂಧೂರ ನಾರಾಯಣ,ಕಾರ್ಯನಿರ್ವಾಹಕ ನಿರ್ದೇಶಕ ಪುನೀತ್ ಕೋತಪ,ನಿರ್ದೇಶಕರಾದ ರಮಾ ನಾರಾಯಣ, ಪದ್ಮಜಾ ಕೋತಪ, ಕಾಲೇಜಿನ ಡೀನ್‍ಗಳಾದ ಸುರೇಂದ್ರನಾಥರೆಡ್ಡಿ, ಸಾಯಿರಾಮ ಅವರು ಪಾಲ್ಗೊಂಡಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

 

Recent Articles

spot_img

Related Stories

Share via
Copy link
Powered by Social Snap