ಲೋಕಸಭಾ ಚುನಾವಣೆ:ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ …!!!

ಬೆಂಗಳೂರು

       ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆಯಾಗಿದೆ.ನಮ್ಮ ರಾಜ್ಯದ  28 ಕ್ಷೇತ್ರಗಳ ಪೈಕಿ 21 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.ಬಿಜೆಪಿ ನಾಯಕ ಜೆ.ಪಿ.ನಡ್ಡಾ ಅವರು ಗುರುವಾರ ಸಂಜೆ 182 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು. ಕರ್ನಾಟಕದ 21 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಹಾಲಿ ಸಂಸದರಿಗೆ ಬಿಜೆಪಿ ಈ ಬಾರಿಯೂ ಟಿಕೆಟ್ ನೀಡಿದೆ.

ಅಭ್ಯರ್ಥಿಗಳ ಪಟ್ಟಿ ಈ ರೀತಿ ಇದೆ:

        “ಬೆಳಗಾವಿ – ಸುರೇಶ್ ಅಂಗಡಿ, ಬಾಗಲಕೋಟೆ – ಪಿ.ಸಿ.ಗದ್ದಿಗೌಡರ್ , ವಿಜಯಪುರ – ರಮೇಶ್ ಜಿಗಜಿಣಗಿ , ಕಲಬುರಗಿ – ಡಾ.ಉಮೇಶ್ ಜಾಧವ್, ಬೀದರ್ – ಭಗವಂತ ಖೂಬಾ, ಬಳ್ಳಾರಿ – ದೇವೇಂದ್ರಪ್ಪ , ಹಾವೇರಿ – ಶಿವಕುಮಾರ್ ಉದಾಸಿ, ಧಾರವಾಡ – ಪ್ರಹ್ಲಾದ್ ಜೋಶಿ, ಉತ್ತರ ಕನ್ನಡ – ಅನಂತ್ ಕುಮಾರ್ ಹೆಗಡೆ , ದಾವಣಗೆರೆ – ಜಿ.ಎಂ.ಸಿದ್ದೇಶ್ವರ್ , ಶಿವಮೊಗ್ಗ – ಬಿ.ವೈ.ರಾಘವೇಂದ್ರ , ಉಡುಪಿ-ಚಿಕ್ಕಮಗಳೂರು – ಶೋಭಾ ಕರಂದ್ಲಾಜೆ, ಹಾಸನ – ಎ.ಮಂಜು , ದಕ್ಷಿಣ ಕನ್ನಡ – ನಳೀನ್ ಕುಮಾರ್ ಕಟೀಲ್ ,ಚಿತ್ರದುರ್ಗ – ಎ.ನಾರಾಯಣಸ್ವಾಮಿ , ತುಮಕೂರು – ಜಿ.ಎಸ್.ಬಸವರಾಜ್, ಮೈಸೂರು-ಕೊಡಗು : ಪ್ರತಾಪ್ ಸಿಂಹ , ಬೆಂಗಳೂರು ಉತ್ತರ : ಡಿ.ವಿ.ಸದಾನಂದ ಗೌಡ , ಬೆಂಗಳೂರು ಕೇಂದ್ರ : ಪಿ.ಸಿ.ಮೋಹನ್ , ಚಿಕ್ಕಬಳ್ಳಾಪುರ – ಬಿ.ಎನ್.ಬಚ್ಚೇಗೌಡ , ಚಾಮರಾಜನಗರ – ವಿ.ಶ್ರೀನಿವಾಸ ಪ್ರಸಾದ್”.

                      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link