ಸಾವಯವ ಕೃಷಿ ಉತ್ತೇಜನಕ್ಕೆ ಕೇಂದ್ರ ಹೆಚ್ಚಿನ ಗಮನ ನೀಡಿದೆ:ಡಿವಿಎಸ್

ಬೆಂಗಳೂರು 

       ದೇಶದಲ್ಲಿ ಸಾವಯವ ಕೃಷಿ ಉತ್ತೇಜನಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಗಮನ ನೀಡಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.

      ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ನೆಟ್ಟದಕಿದು ಗ್ರಾವiದಲ್ಲಿ ಏರ್ಪಡಿಸಿದ್ದ, ಕೃಷಿ ಮೇಳ ಕಾರ್ಯಕ್ರಮದಲ್ಲಿ ಅವರು ಈ ವಿಷಯ ತಿಳಿಸಿದರು.

       ಸಾವಯವ ಕೃಷಿಯನ್ನು ಹೆಚ್ಚು ಜನಪ್ರಿಯಗೊಳಿಸಲು ಪಾರಂಪರಿಕ ಕೃಷಿ ವಿಕಾಸ ಯೋಜನೆಯನ್ನು ಕೇಂದ್ರ ಆರಂಭಿಸಿದೆ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಈಗಾಗಲೇ 10 ಲಕ್ಷ ಹೆಕ್ಟರ್‍ಗೂ ಹೆಚ್ಚು ಭೂ ಪ್ರದೇಶವನ್ನು ಪಾರಂಪರಿಕ ಕೃಷಿ ಪದ್ಧತಿಗೆ ಒಳಪಡಿಸಲಾಗಿದೆ. ಕಳೆದ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ರೈತರ ಜೀವನ ಉತ್ತಮ ಪಡಿಸಲು ಕೇಂದ್ರ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದರು.

      ಹವಾಮಾನ ಮತ್ತು ನೈಸರ್ಗಿಕ ದುರಂತಗಳಿಂದ ಬೆಳೆ ಕಳೆದುಕೊಳ್ಳುವ ರೈತರ ಹಿತ ಕಾಪಾಡಲು ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಜಾರಿಗೆ ತರಲಾಗಿದೆ ಎಂದು ಅವರು ತಿಳಿಸದಿರು.

      ದೇಶದ ವರಮಾನಕ್ಕೆ ಕೃಷಿ ಕ್ಷೇತ್ರ ಶೇಕಡ 17 ರಷ್ಟು ಪಾಲು ನೀಡುತ್ತಿದೆ. ಉದ್ಯೋಗ ಒದಗಿಸುವಲ್ಲಿ ಕೃಷಿ ಕ್ಷೇತ್ರವೇ ಬಹಳ ಮುಂಚೂಣಿಯಲ್ಲಿದೆ ಎಂದು ಸದಾನಂದ ಗೌಡ ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ