ಬೆಂಗಳೂರು
ಬಂಗಾಳ ಕೊಲ್ಲಿಯ ಕೇಂದ್ರ ಭಾಗಕ್ಕೆ ಹೊಂದಿಕೊಂಡ ಹಾಗೂ ವಾಯುವ್ಯ ಭಾಗದಲ್ಲಿ ತೀವ್ರ ಒತ್ತಡ ಕಾಣಿಸಿಕೊಂಡಿದ್ದು, ಇದರ ಪರಿಣಾಮ ಗಾಜಾ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆ ಇದೆ.
ಮುಂದಿನ 24 ಗಂಟೆಗಳ ಅವಧಿಯಲ್ಲಿ ಚಂಡಮಾರುತ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 12 ಗಂಟೆಗಳ ಅವಧಿಯಲ್ಲಿ ಅಂಡಮಾನ್ ದ್ವೀಪದ ಅಸುಪಾಸಿನಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ.
ಈ ಮಧ್ಯೆ ಕರಾವಳಿಯ ಹಲವೆಡೆ ಮಳೆಯಾಗಿದೆ. ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ. ಮೈಸೂರಿನಲ್ಲಿ ದಿನದ ಕನಿಷ್ಠ 13.1 ಡಿಗ್ರಿ ಸೆಲ್ಷಿಯಸ್ ತಾಪಮಾನ ದಾಖಲಾಗಿದೆ.
ಮುನ್ಸೂಚನೆಯಂತೆ ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದೆ. ಬೆಂಗಳೂರು ಸುತ್ತಮುತ್ತ ಶುಬ್ರ ಆಕಾಶ. ಬೆಳಗಿನ ವೇಳೆ ಕೆಲವು ಪ್ರದೇಶಗಳಲ್ಲಿ ಮಂಜು ಸುರಿಯಲಿದೆ. ಗರಿಷ್ಠ 29 ಹಾಗೂ ಕನಿಷ್ಠ 18 ಡಿಗ್ರಿ ಸೆಲ್ಷಿಯಸ್ ತಾಪಮಾನ ದಾಖಲಾಗುವ ಸಂಭವವಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
