ಬೆಂಗಳೂರು
ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿ ಬಗ್ಗೆ ಅಸಮಾಧಾನಗೊಂಡಿರುವ ಕಾಂಗ್ರೆಸ್ ಶಾಸಕರನ್ನು ಸಮಾಧಾನಪಡಿಸಲು ಇದೀಗ ಸ್ವತಃ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅಖಾಡಕ್ಕೆ ಇಳಿಯಲಿದ್ದಾರೆ.ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್ ಶಾಸಕರ ಅಸಮಾಧಾನ ಬಗೆಹರಿಸಲು ಕುಮಾರ ಸ್ವಾಮಿ ನಿರ್ಧರಿಸಿದ್ದಾರೆ.ಸ್ವತಃ ಕುಮಾರ ಸ್ವಾಮಿ ಅವರೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಕೂಟದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆಸಮಾಧಾನಪಡಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾವಿ ಅವರಿಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸೂಚಿಸಿದ್ದರು. ಶಾಸಕಾಂಗ ಸಭೆಯಲ್ಲಿ ಶಾಸಕರನ್ನು ನಿಯಂತ್ರಿಸುವುದು ತ್ರಾಸದಾಯಕವಾಗಿದೆ. ಹೀಗಾಗಿ ಇದೇ 8ರಂದು ನಗರದ ಖಾಸಗಿ ಹೋಟೆಲ್‍ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಮಿಶ್ರ ಸರ್ಕಾರ ರಚನೆಯಾದಾಗಿನಿಂದಲೂ ಗೊಂದಲಗಳು, ಸಮಸ್ಯೆಗಳು ಮುಂದುವರೆದಿವೆ. ಇದಕ್ಕಾಗಿಯೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಿ ಅಲ್ಲಿ ಕುಮಾರಸ್ವಾಮಿ ಅವರ ಮೂಲಕವೇ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ನಿರ್ಧರಿಸಲಾಗಿದೆ.
ಇನ್ನು ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಶಾಸಕರನ್ನು ಎರಡನೇ ದರ್ಜೆ ಶಾಸಕರಂತೆ ಕಾಣಲಾಗುತ್ತೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸಿರುವ ಸಿದ್ದರಾಮಯ್ಯ ಇದಕ್ಕೆ ಸಿಎಂ ಕುಮಾರಸ್ವಾಮಿ ಮೂಲಕವೇ ಉತ್ತರ ಕೊಡಿಸಲು ಮುಂದಾಗಿದ್ದಾರೆನ್ನಲಾಗಿದೆ.
ಉಳಿದಂತೆ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಹಸ್ತಕ್ಷೇಪ, ಸಮರ್ಪಕ ಅನುದಾನ ಬಿಡುಗಡೆ ಸಮಸ್ಯೆ, ಕಾಂಗ್ರೆಸ್ ಶಾಸಕರ ಬೇಡಿಕೆಗೆ ಸ್ಪಂದನೆ ಇಲ್ಲದಿರುವುದು ಸೇರಿದಂತೆ ಹಲವು ವಿಚಾರಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಶಾಸಕಾಂಗ ಸಭೆಯಲ್ಲಿ ಉತ್ತರ ನೀಡಲಿದ್ದಾರೆ.
ಈ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಕುಮಾರ ಸ್ವಾಮಿ, ಸ್ವತಃ ತಾವೇ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಅವರಿಗೆ ಸಭೆಯಲ್ಲಿ ಪಾಲ್ಗೊಂಡು ಉತ್ತರ ನೀಡುವುದಾಗಿ ಮನವಿ ಮಾಡಿದ್ದೆ. ಶಾಸಕರ ಯಾವುದೇ ಸಮಸ್ಯೆಗಳನ್ನು ಬಗೆಹರಿಸಲು ತಾವು ಸಿದ್ಧವಾಗಿದ್ದೇವೆ.ಗೊಂದಲಗಳಿದ್ದರೆ ಅದರ ಬಗ್ಗೆ ಚರ್ಚಿಸಿ ಬಗೆಹರಿಸಲು ಪರಿಹರಿಸಲಾಗುವುದು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ