ಚಳ್ಳಕೆರೆ
ನಾಡಿನ ಶೋಷಿತ ಸಮುದಾಯದ ಅಭ್ಯುದಯಕ್ಕಾಗಿ ದಲಿತ ವಚನಕಾರರು ತಮ್ಮದೇಯಾದ ಉತ್ತಮ ವಚನಗಳ ರಚನೆಯನ್ನು ಮಾಡುವ ಮೂಲಕ ಸಮುದಾಯಕ್ಕೆ ಶಕ್ತಿಯನ್ನು ತುಂಬಿದವರು. ಈ ಹಿನ್ನೆಲೆಯಲ್ಲಿ ದಲಿತ ವಚನಕಾರರ ಜಯಂತಿ ಕಾರ್ಯಕ್ರಮವನ್ನು ಅರ್ಥಗರ್ಭಿತವಾಗಿ ಆಚರಿಸಬೇಕೆಂದು ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು, ತಹಶೀಲ್ದಾರರಾದ ಎಂ.ಮಲ್ಲಿಕಾರ್ಜುನ ತಿಳಿಸಿದರು.
ಅವರು, ಸೋಮವಾರ ಮಧ್ಯಾಹ್ನ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ದಲಿತ ವಚನಕಾರರ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಅರ್ಥಗರ್ಭಿತವಾಗಿ ಸಮಾಜವನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ವ್ಯವಸ್ಥಿತವಾಗಿ ನಡೆಸುವಂತೆ ಹಲವಾರು ದಲಿತ ಸಂಘಟನೆಗಳ ಮುಖಂಡರು ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ದಲಿತ ವಚನಕಾರರ ಜಯಂತಿ ಕಾರ್ಯಕ್ರಮವನ್ನು ಫೆ.25ರ ಸೋಮವಾರ ಬೆಳಗ್ಗೆ 10.30ಕ್ಕೆ ಸರ್ಕಾರಿ ನೌಕರರ ಭವನದಲ್ಲಿ ಆಚರಿಸುವಂತೆ ನಿರ್ಣಯಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ವಹಿಸಲಿದ್ದು ಕಾರ್ಯಕ್ರಮ ಯಶಸ್ಸಿಗೆ ವಿವಿಧ ದಲಿತ ಸಂಘಟನೆಗಳ ಮುಖಂಡರು ಸಹಕಾರ ನೀಡುವಂತೆ ಮನವಿ ಮಾಡಿದರು.
ನಗರಸಭೆಯ ಮಾಜಿ ಉಪಾಧ್ಯಕ್ಷ ಟಿ.ವಿಜಯಕುಮಾರ್, ಚಂದ್ರು, ಭದ್ರಿ, ಹೊನ್ನೂರು ಮಾರಣ್ಣ, ಭೀಮನಕೆರೆ ಶಿವಮೂರ್ತಿ, ಎಸ್.ರಾಜಣ್ಣ, ರುದ್ರಮುನಿ, ಸುರೇಶ್, ಮೈತ್ರಿ ದ್ಯಾಮಣ್ಣ, ನಾಗರಾಜು, ಪ್ರಕಾಶ್, ಕೆಂಚಡಿಯಪ್ಪ, ಜಾಲಿಮಂಜುನಾಥ, ಎಸ್ಟಿ ನಿಗಮದ ಅಧಿಕಾರಿ ಮಾಲತಿ, ಸಮಾಜ ಕಲ್ಯಾಣಾಧಿಕಾರಿ ಮಂಜಪ್ಪ, ಕೃಷಿ ಅಧಿಕಾರಿ ಮಾರುತಿ, ರೇಷ್ಮ ಅಧಿಕಾರಿ ಕೆಂಚಡಿಯಪ್ಪ, ಮುಂತಾದವರು ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡಿದ್ದರು. ಪ್ರಾರಂಭದಲ್ಲಿ ಡಿ.ಶ್ರೀನಿವಾಸ್‍ಸ್ವಾಗತಿಸಿದರು, ಗ್ರಾಮಲೆಕ್ಕಾಧಿಕಾರಿ ರಾಜೇಶ್ ವಂದಿಸಿದರು.