ಎದೆ ಗುಂದಬೇಡಿ, ನಿಮ್ಮ ಜತೆ ಕಾಂಗ್ರೆಸ್‍ ಇದೆ

ದಾವಣಗೆರೆ

       ಯಾವುದಕ್ಕೂ ಎದೆ ಗುಂದಬೇಡಿ, ನಿಮ್ಮ ಜೊತೆಗೆ ಎಂದಿಗೂ ಕಾಂಗ್ರೆಸ್ ಇದೆ. ನಿಮಗೆ ಬೇಕಾದ ಸೌಲಭ್ಯಗಳನ್ನು ಸರ್ಕಾರದಿಂದ ಕೊಡಿಸಲು ಪ್ರಾಮಾಣಿಕ ಪ್ರಯತ್ನವನ್ನು ಪಕ್ಷ ಮಾಡಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ ವಿಕಲಚೇತನರಿಗೆ ಅಭಯ ನೀಡಿದರು.

       ನಗರದ ಮೋತಿವೀರಪ್ಪ ಪದವಿಪೂರ್ವ ಕಾಲೇಜು ಆವರಣದಲ್ಲಿ ಭಾನುವಾರ ಜಿಲ್ಲಾ ಕಾಂಗ್ರೆಸ್‍ನ ವಿಕಲಚೇತನ ಘಟಕದಿಂದ ಏರ್ಪಡಿಸಿದ್ದ ಪ್ರಥಮ ವಿಕಲಚೇತನರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗಲೆಲ್ಲಾ ವಿಕಲಚೇತನರಿಗೆ ಎಲ್ಲಾ ಸವಲತ್ತುಗಳನ್ನು ಕಲ್ಪಿಸುತ್ತಾ ಬಂದಿದೆ. ಮುಂದೆಯೂ ವಿಕಚೇತನರು ಎದೆಗುಂದಬೇಕಿಲ್ಲ. ನಿಮಗೆ ಟ್ರೈಸೈಕಲ್, ತ್ರಿಚಕ್ರ ಬೈಕ್, ಮಾಶಾಸನ ಸೇರಿದಂತೆ ನಿಮ್ಮ ಮುಂದಿರುವ ಎಲ್ಲಾ ಸಮಸ್ಯೆಗಳನ್ನು ರಾಜ್ಯದ ಮುಖಂಡರ ಗಮನಕ್ಕೆ ತಂದು ಸರಿಪಡಿಸುತ್ತೇವೆ ಎಂದು ಹೇಳಿದರು.

      ನಿಮ್ಮಲ್ಲಿರುವ ಕೀಳರಿಮೆ ತೊರೆದು, ನಾವು ಯಾರಿಗೂ ಕಡಿಮೆಯಿಲ್ಲದಂತೆ ಸ್ವಾವಲಂಬಿ ಬದುಕನ್ನು ನಡೆಸಬೇಕು. ಈ ನಿಟ್ಟಿನಲ್ಲಿ ಬದುಕು ಕಟ್ಟಿಕೊಳ್ಳಲು ಕಾಂಗ್ರೆಸ್ ನಿಮಗೆ ಸದಾ ಬೆಂಬಲ ನೀಡಲಿದೆ. ಶಾಸಕ ಶಾಮನೂರು ಶಿವಶಂಕರಪ್ಪ, ಎಸ್.ಎಸ್.ಮಲ್ಲಿಕಾರ್ಜುನಪ್ಪ ಸಚಿವರಾದ ಸಂದರ್ಭ ಅಂಗವಿಕಲರಿಗಾಗಿ ಸಾಕಷ್ಟು ಅನುಕೂಲ ಕಲ್ಪಿಸಿದ್ದಾರೆ ಎಂದರು.

       ಶೋಷಿತ ವರ್ಗದ ದನಿಯಾಗಲು, ನ್ಯಾಯಕೊಡಿಸಲು ಕಾಂಗ್ರೆಸ್ ಅನೇಕ ಸಂಘಟನೆಗಳನ್ನು ರೂಪಿಸಿದ್ದು, ಎಲ್ಲರೂ ಸಂಘಟನೆಯಲ್ಲಿ ಸಕ್ರೀಯರಾಗಿ ಪಾಲ್ಗೊಳ್ಳುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕೆಂದು ಕಿವಿಮಾತು ಹೇಳಿದರು.

         ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಪಾಲಿಕೆ ಸದಸ್ಯ ದಿನೇಶ್ ಕೆ. ಶೆಟ್ಟಿ ಮಾತನಾಡಿ, ವಿಕಲಚೇತನರು ತಮ್ಮ ವಿವಿಧ ಬೇಡಿಕೆ ಈಡೇರಿಕೆಗೆ ಮನವಿ ಸಲ್ಲಿಸಿದ್ದು, ಈ ಕುರಿತು ಪಕ್ಷದ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮತ್ತಿತರ ಮುಖಂಡರ ಗಮನಕ್ಕೆ ತಂದು ಬೇಡಿಕೆ ಈಡೇರಿಸುವಂತೆ ಒತ್ತಡ ಹೇರುತ್ತೇವೆ ಎಂದರು.

       ವಿಕಲಚೇತನರು ತಮಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಕರೆ ಮಾಡಿ ಹೇಳಿಕೊಳ್ಳಬಹುದು. ಇದಕ್ಕಾಗಿ ಜಿಲ್ಲಾಮಟ್ಟದಲ್ಲಿ ವಾಟ್ಸಪ್‍ಗ್ರೂಪ್ ಸಹ ರಚಿಸಿದ್ದು, ಯಾವುದೇ ತಹಸೀಲ್ದಾರ್, ಜಿಲ್ಲಾಧಿಕಾರಿ, ಪಾಲಿಕೆ ಮತ್ತಿತರ ಕಚೇರಿಗಳಲ್ಲಿನ ಯಾವುದೇ ಕೆಲಸವಿದ್ದರೂ ನಾವು ಮಾಡಿಸಿಕೊಡುತ್ತೇವೆ ಎಂದು ಹೇಳಿದರು.

       ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವಿಕಲಚೇತನ ಘಟಕದ ರಾಜ್ಯಾಧ್ಯಕ್ಷ ಎಸ್. ಬಸವಣ್ಣ ಅಧ್ಯಕ್ಷತೆ ವಹಿಸಿದ್ದರು.ಸಮಾವೇಶದಲ್ಲಿ ದೂಡಾ ಮಾಜಿ ಅಧ್ಯಕ್ಷ ಅಯೂಬ್ ಪೈಲ್ವಾನ್, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್, ಮುಖಂಡರಾದ ಗೀತಾ ಕದರಮಂಡಲಗಿ, ಚಂದ್ರಮ್ಮ, ಮಹಾಂತೇಶ್, ಸೈಯದ್ ತೌಸಿಪ್, ವೀರಯ್ಯಸ್ವಾಮಿ, ಸುಧಾ ಗೌಡ್ರಚನ್ನಬಸಪ್ಪ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಕಾಂಗ್ರೆಸ್ ವಿಕಲಚೇತನ ಘಟಕದ ಅಧ್ಯಕ್ಷ ಯತಿರಾಜ್ ಎಸ್ ಮಠದ ಸ್ವಾಗತಿಸಿ, ನಿರೂಪಿಸಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap