ಚಿತ್ರದುರ್ಗ:
ಜೋಗಿಮಟ್ಟಿ ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಗರಸಭೆ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ಕರಡುಮತದಾರರ ಪಟ್ಟಿ ವಿಶೇಷ ಮತದಾರರ ಪರಿಷ್ಕರಣೆ ಹಾಗೂ ಹೊಸ ಬರ ನೊಂದಣಿಗೆ ತಹಶೀಲ್ದಾರ್ ಮಲ್ಲಿಕಾರ್ಜುನ್‍ರವರು ಚಾಲನೆ ನೀಡಿದರು.
ನೊಂದಣಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ತಹಶೀಲ್ದಾರ್ ಮಲ್ಲಿಕಾರ್ಜುನ್‍ರವರು 1-1-2019 ಕ್ಕೆ ಹದಿನೆಂಟು ವರ್ಷ ತುಂಬುವವರು ಮತದಾರರ ಪಟ್ಟಿಯಲ್ಲಿ ವಿಶೇಷ ನೊಂದಣಿ ಮಾಡಿಸಿಕೊಳ್ಳಬಹುದು. ತಿದ್ದುಪಡಿ, ವಿಳಾಸ ಬದಲಾವಣೆ ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿರುವವರು ಕರಡು ಮತದಾರರ ಪಟ್ಟಿ ಪರಿಷ್ಕರಣೆಯ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ ಮಾಡಿದರು.ನಗರಸಭೆ ಪೌರಾಯುಕ್ತರಾದ ಚಂದ್ರಪ್ಪ, ಕಂದಾಯಾಧಿಕಾರಿ ವಾಸೀಂ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
