ಕೊಲೆ ಆರೋಪಿಗಳ ಬಂಧನ ..!!

ಬೆಂಗಳೂರು

        ಆನೇಕಲ್‍ನ ಮುತ್ತಕಟ್ಟೆ ರಸ್ತೆಯ ಲಕ್ಷ್ಮಿರಂಗನಾಥ ಸ್ವಾಮಿ ದೇವಾಲಯದ ಬಳಿ ಯುವಕನೊಬ್ಬನನ್ನು ಕೊಲೆ ಮಾಡಿ ಪರಾರಿಯಾಗಿದ್ದ ಪ್ರಕರಣವನ್ನು ಬೇಧಿಸಿರುವ ಆನೇಕಲ್ ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಮಿಳುನಾಡು ಮೂಲದ ದೊಡ್ಡಯ್ಯ ಅಲಿಯಾಸ್ ಆನೇಕಲ್ ಅಪ್ಪಿ (21), ಶಿವರಾಜು ಅಲಿಯಾಸ್ ಶಿವ (24) ಬಂಧಿತ ಆರೋಪಿಗಳಾಗಿದ್ದಾರೆ.

        ಆರೋಪಿಗಳು ಕಳೆದ ಫೆ. 17 ರಂದು ಮಧ್ಯರಾತ್ರಿ ಆನೇಕಲ್‍ನ ಮುತ್ತುಕಟ್ಟೆ ರಸ್ತೆಯ ಖಾಲಿ ಜಾಗದಲ್ಲಿ ಬೊಮ್ಮಲಾಪುರದ ಲೋಕೇಶ್ (30) ಮೇಲೆ ಹಲ್ಲೆ ನಡೆಸಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದರು.
ಮುಂಜಾನೆ ವಾಯು ವಿಹಾರಕ್ಕೆ ಹೋದವರು ಮಾಹಿತಿ ನೀಡಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಆನೇಕಲ್ ಪೊಲೀಸರು ಪರಿಶೀಲನೆ ನಡೆಸಿದಾಗ ಆರೋಪಿಗಳು ಲೋಕೇಶ್‍ನನ್ನು ಮದ್ಯಪಾನ ಮಾಡಲು ಕರೆದುಕೊಂಡು ಹೋಗಿ ಕುಡಿದ ಅಮಲಿನಲ್ಲಿ ಜಗಳ ಮಾಡಿಕೊಂಡು ವಿಕೋಪಕ್ಕೆ ತಿರುಗಿದಾಗ ಕೊಲೆ ಮಾಡಿರುವುದು ಪತ್ತೆಯಾಗಿದೆ.ಪ್ರಕರಣ ದಾಖಲಿಸಿ ಆರೋಪಿಗಳನ್ನು ಆನೇಕಲ್ ಪೆÇಲೀಸರು ಬಂಧಿಸಿದ್ದಾರೆ ಎಂದು ಎಸ್‍ಪಿ ಶಿವಕುಮಾರ್ ತಿಳಿಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link