ರೈತರ ನೂತನ ತಾಲ್ಲೂಕು ಘಟಕ ಉದ್ಘಾಟನೆ

ಗುಬ್ಬಿ

     ಜಿಲ್ಲೆಯಲ್ಲಿ ಕಳೆದ ಹಲವು ವರ್ಷಗಳಿಂದಲೂ ಸಮರ್ಪಕವಾಗಿ ಮಳೆ ಬಾರದೆ ಅಂತರ್ಜಲ ಸಂಪೂರ್ಣವಾಗಿ ಕುಸಿದಿದ್ದು ರೈತರ ಪರಿಸ್ಥತಿ ಹೇಳತೀರದಾಗಿದ್ದು ರೈತರ ಬದುಕಿಗೆ ಜೀವನಾಧಾರವಾಗಿರುವ ಕೃಷಿ ಮತ್ತು ತೋಟಗಾರಿಕೆ ಬೆಳೆಗಳು ಒಣಗುತ್ತಿದ್ದು ಜನ ಜಾನುವಾರುಗಳ ಕುಡಿಯುವ ನೀರಿಗೂ ಪರಿತಪಿಸುವಂತಹ ಸ್ಥಿತಿ ನಿರ್ಮಾಣವಾಗಿದೆ ಇಂತಹ ಸಂದರ್ಭದಲ್ಲಿ ಸರ್ಕಾರ ಹೇಮಾವತಿ, ತುಂಗಭದ್ರ ಮತ್ತು ಎತ್ತಿನಹೊಳೆ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವ ಮೂಲಕ ಜಿಲ್ಲೆಯ ರೈತರಿಗೆ ಸಮರ್ಪಕವಾದ ನೀರಾವರಿ ಸೌಲಭ್ಯ ಕಲ್ಪಿಸಬೇಕೆಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲ್ ಪುರ ನಾಗೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

      ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ತಾಲ್ಲೂಕು ಘಟಕ ಉದ್ಘಾಟನೆ ಮತ್ತು ಎಪಿಎಂಸಿ ಆವರಣದಲ್ಲಿ ರೈತ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಜಿಲ್ಲೆಯ ರೈತರಿಗೆ 10 ತಾಲೂಕುಗಳ ರೈತರು ನೀರಿಗಾಗಿ ಪರಿತಪಿಸುವ ಪರಿಸ್ಥಿತಿ ಉಂಟಾಗಿದೆ ದಿನೆ ದಿನೆ ಬಿಸಿಲಿನ ತಾಪ ಹೆಚ್ಚುತ್ತಿದ್ದು ರೈತರ ಜೀವನಾಧಾರವಾಗಿದ್ದ ಬೆಳೆಗಳು ಒಣಗುತ್ತಿವೆ.

       ಕಳೆದ 10 ವರ್ಷದಿಂದ ನಿಗಧಿತ ಪ್ರಮಾಣದಲ್ಲಿ ಮಳೆ ಬೀಳದೆ ಜಿಲ್ಲೆಯ 60 ಸಾವಿರ ಹೆಕ್ಟೇರ್ ಪ್ರದೇಶಕ್ಕೆ 27 ಟಿ.ಎಂ.ಸಿ ಯಷ್ಟು ನೀರನ್ನು ಒದಗಿಸಬೇಕಾಗಿತ್ತು. ಪ್ರಸಕ್ತ ವರ್ಷದಲ್ಲಿ ಜಿಲ್ಲೆಯಲ್ಲಿ 2010 ಕೆರೆಗಳು ಬರಿದಾಗಿವೆ ಇದರಿಂದ ಅಂತರ್ಜಲ ಕುಸಿತಕ್ಕೆ ಕಾರಣವಾಗಿದೆ.

       ಗ್ರಾಮೀಣ ಬಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ ಬಗ್ಗೆ ಜಿಲ್ಲಾ ಆಢಳಿತ ಗಮನ ಹರಿಸಬೇಕು ರೈತರ ಸಮಸ್ಯೆ ಬಗೆ ಹರಿಸಬೇಕು ಬರಗಾಲದಲ್ಲಿ ಅತ್ಯಂತ ಹೆಚ್ಚು ಕೊಳವೆ ಬಾವಿ ಕೊರೆಸಲಾಗುತ್ತಿದೆ ಕೊಳವೆ ಲಾರಿಯ ಮಾಲಿಕರು ರೈತರಿಂದ ಹೆಚ್ಚಿನ ಹಣವನ್ನು ವಸೂಲಿಯನ್ನು ಮಾಡುತ್ತಿದ್ದು ಇದರ ಬಗ್ಗೆ ಸರಕಾರ ಸರಿಯಾಗಿ ಕಾನೂನು ರೂಪಿಸಬೇಕು ಎಂದು ಒತ್ತಾಯಿಸಿದರು.

        ಜಿಲ್ಲಾ ರೈತ ಸಂಘದ ಅಧ್ಯಕ್ಷ ಎ.ಗೋವಿಂದರಾಜು ಮಾತನಾಡಿ ತಾಲೂಕಿನ ಹೇಮಾವತಿ ನಾಲೆಯ 66 -69 ನೇ ಕಿ.ಮೀ ನಿಂದ ಕುಣಿಗಲ್ ತಾಲೂಕಿನ 166 ನೇ ಕಿ.ಮೀ ಹೊಸದಾಗಿ ಸಂಪರ್ಕ ಕಾಲುವೆ ನಿರ್ಮಿಸಿ ಮಾಗಡಿ, ಕನಕಪುರ ಭಾಗಕ್ಕೆ ನೀರು ತೆಗೆದುಕೊಂಡು ಹೋಗುವ ಪ್ರಯತ್ನವನ್ನು ಸರ್ಕಾರ ಕೂಡಲೆ ಕೈಬಿಡಬೇಕೆಂದು ಒತ್ತಾಯಿಸಿದ ಅವರು ಬಿಕ್ಕೆಗುಡ್ಡ ಮತ್ತು ಹಾಗಲವಾಡಿ ಸೇರಿದಂತೆ ಎಲ್ಲಾ ಕುಡಿಯುವ ನೀರಿನ ಯೋಜನೆಗಳನ್ನು ಸರ್ಕಾರ ತ್ವರಿತವಾಗಿ ಅನುಷ್ಠಾನಗೊಳಿಸಬೇಕಿದೆ. ಜಿಲ್ಲೆಯ ರೈತರ ಹಲವು ಸಮಸ್ಯೆಗಳನ್ನು ಬಗೆಹರಿಸುವತ್ತ ಸರ್ಕಾರ ಸೂಕ್ತವಾದ ಕ್ರಮಗಳನ್ನು ಕೈಗೋಳುವಂತೆ ಒತ್ತಾಯಿಸಿದರು.

        ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ರೈತಸಂಘ ಉಪಾಧ್ಯಕ್ಷ ರಾಮಸ್ವಾಮಿ, ರಾಜ್ಯ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್, ರಾಜ್ಯ ಸಂಘದ ಪ್ರಧಾನ ಕಾರ್ಯಧರ್ಶಿ ಪೂಣಚ್ಚ, ರಾಜ್ಯ ಪ್ರಧಾನ ಕಾರ್ಯದರ್ಶಿ ಶಂಕರಣ್ಣ, ತಾಲ್ಲೂಕು ಅಧ್ಯಕ್ಷ ನಿಜಾನಂದಮೂರ್ತಿ, ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರಪ್ಪ, ಪದಾಧಿಕಾರಿಗಳಾದ ಸಿ.ಜಿ.ಲೋಕೇಶ್, ವೆಂಕಟೇಗೌಡ, ಜಗದೀಶ್, ಸಿ.ಕೆ.ಪ್ರಕಾಶ್, ಸಿ.ಟಿ.ಕುಮಾರ್, ಜಿ.ಶಿವಕುಮಾರ್, ಗುರುಚನ್ನಬಸಪ್ಪ ಮುಂತಾದವರು ಭಾಗವಹಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap