ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ಸಿಗೆ ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಲು ಸೂಚನೆ

ಚಳ್ಳಕೆರೆ

           ಪುಟ್ಟಮಕ್ಕಳ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಯಾವುದೇ ರೀತಿಯ ರೋಗಗಳು ವ್ಯಾಪಿಸದ ಹಿನ್ನೆಲೆಯಲ್ಲಿ ಕೈಗೊಳ್ಳುವ ಪಲ್ಸ್ ಪೋಲಿಯೋ ಕಾರ್ಯಕ್ರಮದ ಯಶಸ್ಸಿಗೆ ತಾಲ್ಲೂಕು ಆಡಳಿತ ಎಲ್ಲಾ ರೀತಿಯ ಸಹಕಾರ ನೀಡಲಿದ್ದು, ಪ್ರತಿಯೊಬ್ಬ ಅಧಿಕಾರಿಯೂ ಈ ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡುವಂತೆ ಚುನಾವಣಾ ಶಿರಸ್ತೇದಾರ್ ಮಂಜುನಾಥ ತಿಳಿಸಿದರು.

          ಅವರು, ಶನಿವಾರ ಮಧ್ಯಾಹ್ನ ಇಲ್ಲಿನ ತಾಲ್ಲೂಕು ಕಚೇರಿ ಆವರಣದಲ್ಲಿ ತಾಲ್ಲೂಕು ಮಟ್ಟದ ಪಲ್ಸ್ ಪೋಲಿಯೋ ಪೂರ್ವಭಾವಿ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಕಾರ್ಯಕ್ರಮವಾದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿದರು.

          ಪ್ರಾಸ್ತಾವಿಕವಾಗಿ ಮಾತನಾಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎನ್.ಪ್ರೇಮಸುಧಾ, ಪಲ್ಸ್ ಪೋಲಿಯೋ ಕಾರ್ಯಕ್ರಮ ಮಾರ್ಚ್ 10 ರಿಂದ ಪ್ರಾರಂಭವಾಗಲಿದೆ. ತಾಲ್ಲೂಕಿನಲ್ಲಿ ಒಟ್ಟು 389116 ಜನಸಂಖ್ಯೆ ಇದ್ದು, 31032 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಗುರಿಯನ್ನು ಹೊಂದಲಾಗಿದೆ. ತಾಲ್ಲೂಕಿನಾದ್ಯಂತ ಒಟ್ಟು 78927 ಮನೆಗಳಿದ್ದು, 225 ಬೂತ್ ಗ್ರಾಮೀಣ ಭಾಗದಲ್ಲಿ, ನಗರ ಮಟ್ಟದಲ್ಲಿ 47 ಬೂತ್‍ಗಳನ್ನು ನಿಗದಿಗೊಳಿಸಲಾಗಿದೆ.

            ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಒಂದೇ ಬಾರಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಮಾರ್ಚ್ 10ರ ನಂತರ ನಾಲ್ಕು ದಿನಗಳ ಕಾಲ ಪಲ್ಸ್ ಪೋಲಿಯೋ ಬಗ್ಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗ ಮನೆ, ಮನೆಗೂ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ ಎಂದರು. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಜಂತು ಹುಳ ನಿವಾರಣಾ ಕಾರ್ಯಕ್ರಮವನ್ನು ಸಹ ಆಚರಿಸಲಿದ್ದು, ಫೆ.8ರಂದು ಇಲ್ಲಿನ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದರು.

          ಪೂರ್ವಭಾವಿ ಸಭೆಯಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಡಿ.ಚಿದಾನಂದ, ಎಸ್.ಬಿ.ತಿಪ್ಪೇಸ್ವಾಮಿ, ಡಾ.ಮಂಜುನಾಥ, ಡಾ.ರಮೇಶ್, ಡಾ.ಗೀತಾ, ಡಾ.ಸಂದೀಪ್, ಆರೋಗ್ಯ ನಿರೀಕ್ಷಕ ಗಣೇಶ್, ಪ್ರದೀಪ್, ಶಿಕ್ಷಣ ಇಲಾಖೆ ರುದ್ರಮುನಿ ಮುಂತಾದವರು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap