ಚಿಕ್ಕನಾಯಕನಹಳ್ಳಿ
ಅಸ್ಪೃಶ್ಯತಾ ನಿವಾರಣಾ ಅರಿವು ಕಾರ್ಯಕ್ರಮ, ವಿಚಾರ ಸಂಕಿರಣ ಮತ್ತು ಬೀದಿ ನಾಟಕ ಕಾರ್ಯಕ್ರಮವು ಪಟ್ಟಣದ ನವೋದಯ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಇದೇ 19 ರಂದು ಬೆಳಗ್ಗೆ 10ಕ್ಕೆ ನಡೆಯಲಿದೆ
ಸಮಾಜ ಕಲ್ಯಾಣ ಇಲಾಖೆ, ತಾಲ್ಲೂಕು ಪಂಚಾಯತ್, ನವೋದಯ ಪ್ರಥಮ ದರ್ಜೆ ಕಾಲೇಜು ಹಾಗೂ ದಲಿತ ಸಂಘಟನೆಗಳ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶಾಸಕ ಜೆ.ಸಿ.ಮಾಧುಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.ಕೇಂದ್ರ ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕತ ಕಲಾಶ್ರೀ ಡಾ.ಲಕ್ಷ್ಮಣದಾಸ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಾಹಿತಿ ಪ್ರೊ.ಕೆ.ಬಿ.ಸಿದ್ದಯ್ಯ ಅಸ್ಪøಶ್ಯತಾ ನಿವಾರಣೆ ಕುರಿತು ಉಪನ್ಯಾಸ ನೀಡುವರು. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಡಾ.ದೇವರಾಜು ಪ್ರಾಸ್ತಾವಿಕ ನುಡಿಗಳನ್ನಾಡುವರು.
ಜಿ.ಪಂ.ಸದಸ್ಯರಾದ ಕಲ್ಲೇಶ್, ರಾಮಚಂದ್ರಯ್ಯ, ಮಂಜುಳ, ಸಿದ್ದರಾಮಯ್ಯ, ಮಹಾಲಿಂಗಯ್ಯ ತಾ.ಪಂ.ಅಧ್ಯಕ್ಷೆ ಹೊನ್ನಮ್ಮಶೇಷಯ್ಯ, ತಾ.ಪಂ ಉಪಾಧ್ಯಕ್ಷ ಆಲದಕಟ್ಟೆ ತಿಮ್ಮಯ್ಯ, ತಹಸೀಲ್ದಾರ್ ಡಾ.ಮಂಜುನಾಥ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ನಾರಾಯಣಸ್ವಾಮಿ, ಪುರಸಭೆ ಮುಖ್ಯಾಧಿಕಾರಿ ನಿರ್ವಾಣಯ್ಯ, ಮಾದಿಗ ದಂಡೋರ ಸಮಿತಿ ರಾಜ್ಯ ಕಾರ್ಯದರ್ಶಿ ಬೇವಿನಹಳ್ಳಿ ಚನ್ನಬಸವಯ್ಯ, ಡಿ.ಎಸ್.ಎಸ್. ತಾ.ಸಂಚಾಲಕ ಸಿ.ಎಸ್.ಲಿಂಗದೇವರು, ಪ್ರಾಂಶುಪಾಲರಾದ ಹೆಚ್.ಎಸ್.ಶಿವಯೋಗಿ, ಸಿ.ಜೆ.ಶಿವಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ