ಬಳ್ಳಾರಿ 
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಬಳ್ಳಾರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಹಬ್ಬದ ವಾತಾವರಣ.. ಜಿಲ್ಲಾಧಿಕಾರಿ ಕಚೇರಿಯ ಮಹಿಳಾ ಸಿಬ್ಬಂದಿಗಳೆಲ್ಲ ಹೊಸ ಹೊಸ ಡ್ರೆಸ್ ತೊಟ್ಟು ಶುಭಾಷಯ ಕೋರುವ ಮತ್ತು ಸಿಹಿ ಹಂಚಿಕೊಳ್ಳುವುದರಲ್ಲಿ ಮಗ್ನ.. ಒಟ್ಟಿನಲ್ಲಿ ಎಲ್ಲೆಡೆ ಸಂತೋಷದ ವಾತಾವರಣ ನೆಲೆಸಿತ್ತು.
ಮಧ್ಯಾಹ್ನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಮತ್ತು ಪ್ರೊಬೆಷನರಿ ಐಎಎಸ್ ಅಧಿಕಾರಿ ನಂದಿನಿ ಹಾಗೂ ಅಪರ ಜಿಲ್ಲಾಧಿಕಾರಿ ಸತೀಶಕುಮಾರ ಅವರ ಸಮ್ಮುಖದಲ್ಲಿ ಮಹಿಳಾ ಸಿಬ್ಬಂದಿಗಳೆಲ್ಲರು ಸೇರಿಕೊಂಡು ಕೇಕ್ ಕತ್ತರಿಸಿದರು. ಈ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲರಿಗೂ ಮಹಿಳಾ ದಿನಾಚರಣೆ ಶುಭಾಷಯ ಕೋರುವ ನೆನಪಿನ ಕಾಣಿಕೆ ಮತ್ತು ಗುಲಾಬಿ ಹೂ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಅವರು, ಮಹಿಳೆಯರು ಭಯಭೀತರಾಗಕೂಡದು; ಸಮಾಜದಲ್ಲಿ ಸಿಗುವ ಎಲ್ಲ ಅವಕಾಶಗಳನ್ನು ಬಳಸಿಕೊಂಡು ಮುನ್ನುಗ್ಗುವ ಛಾತಿ ಬೆಳೆಸಿಕೊಳ್ಳಬೇಕು ಮತ್ತು ಒಟ್ಟಿನಲ್ಲಿ ಸದೃಢರಾಗಿ ಜೀವನ ಸಾಗಿಸಬೇಕು ಎಂದರು.
ಪ್ರೊಬೇಷನರಿ ಐಎಎಸ್ ಅಧಿಕಾರಿ ನಂದಿನಿ ಅವರು ಎಲ್ಲರಿಗೂ ಮಹಿಳಾ ದಿನಾಚರಣೆಯ ಶುಭಾಷಯ ತಿಳಿಸಿದರು ಮತ್ತು ಮಹಿಳೆಯ ಸಬಲೀಕರಣವಾಗಬೇಕು ಎಂದರು. ಮಹಿಳಾ ಸಾಧಕಿಯರನ್ನು ಆದರ್ಶವಾಗಿಟ್ಟುಕೊಂಡು ತಮ್ಮ ಜೀವನದಲ್ಲಿಟ್ಟುಕೊಂಡ ಗುರಿ ಸಾಧಿಸಿ ಎಂದು ಕರೆ ನೀಡಿದರು.ಈ ಸಂದರ್ಭದಲ್ಲಿ ಅನೇಕ ಮಹಿಳಾ ಸಿಬ್ಬಂದಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








