ಬೆಂಗಳೂರು
ಒರಿಸ್ಸಾದಿಂದ ಗಾಂಜಾ ತಂದು ಕಾಲೇಜು ವಿದ್ಯಾರ್ಥಿಗಳು, ಐಟಿ-ಬಿಟಿ ಉದ್ಯೋಗಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿ,
6.5 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.ಮಾರತ್ಹಳ್ಳಿಯ ಪ್ರಕಾಶ್ ನಾಯಕ್ (32), ಫ್ರೆಡಿರಾಜ್ (32), ನೀಲಸಂದ್ರದ ಡಿಕ್ಸನ್ (31) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 3 ಲಕ್ಷ ಮೌಲ್ಯದ ಆರೂವರೆ ಕೆಜಿ ಗಾಂಜಾ, ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳು ಒರಿಸ್ಸಾದ ಭುವನೇಶ್ವರದಿಂದ ಗಾಂಜಾ ತಂದು ನಗರದಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ನಂದಿನಿ ಲೇಔಟ್ನ ಸುತ್ತಮುತ್ತ ಗಾಂಜಾ ಮಾರಾಟದ ವಿರುದ್ಧ ಕಾರ್ಯಾಚರಣೆ ಕೈಗೊಂಡ ಪೊಲೀಸರಿಗೆ ಗಿರಾಕಿಯೊಬ್ಬ ನೀಡಿದ ಮಾಹಿತಿ ಆಧರಿಸಿ ಬಿಹೆಚ್ಇಎಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಡಿಸಿಪಿ ಶಶಿಕುಮಾರ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ