ದಾವಣಗೆರೆ
ಏ.20 ರಂದು ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಪ್ರಯುಕ್ತ ಸ್ವೀಪ್ ಕಾರ್ಯಕ್ರಮದಡಿ ವಿಶೇಷ ಚೇತನರಿಗೆ ಮತದಾನ ಮಾಡುವ ಬಗ್ಗೆ ಹಾಗೂ ವಿಶೇಷ ಚೇತನರಿಗೆ ಮತದಾನದ ದಿನದಂದು ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ಇರುವ ಕರಪತ್ರಗಳನ್ನು ಮುದ್ರಿಸಿ ವಿತರಿಸಲು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೂಚಿಸಿದ್ದರು.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೇ ವಿಶೇಷ ಚೇತನರ ಮನೆಗಳಿಗೆ ಭೇಟಿ ನೀಡಿ ಕರಪತ್ರಗಳನ್ನು ನೀಡಿ ಅವರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ ಮತದಾನ ಮಾಡುವಂತೆ ಹೇಳಿದರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
