ನವದೆಹಲಿ: 

ಚುನಾವಣೆಗೆ ಇನ್ನೂ ಕೆಲವೇ ತಿಂಗಳು ಬಾಕಿ ಉಳಿದಿರುವ ಸಂದರ್ಭದಲ್ಲಿ ಬಿಜೆಪಿ ಗೆ ದೊಡ್ಡ ಶಾಕ್ ಆಗಿದೆ ತನ್ನ ಪಕ್ಷದ ಸಂಸದರೊಬ್ಬರು ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ
ಸಂಸದೆ ಸಾವಿತ್ರಿ ಬಾಯಿ ಪುಲೆ ಬಿಜೆಪಿ ತೊರೆದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕಾರ್ಯದರ್ಶಿ, ಪ್ರಿಯಾಂಕಾ ಗಾಂಧಿ ಮತ್ತು ಜ್ಯೋತಿರಾಧಿತ್ಯ ಸಿಂಧಿಯಾ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಉತ್ತರ ಪ್ರದೇಶದ ಬಾಹಾರಿಚ್ ಕ್ಷೇತ್ರದಿಂದ ಬಿಜೆಪಿ ಸಂಸದೆಯಾಗಿ ಸಾವಿತ್ರಿ ಬಾಯಿ ಪುಲೆ 2014 ರ ಚುನಾವಣೆಯಲ್ಲಿ ಆಯ್ಕೆಯಾಗಿದ್ದರು,
ದೇಶದ ಸಂವಿಧಾನ ರಕ್ಷಿಸಲು ಕಾಂಗ್ರೆಸ್ ಸೇರಿದ್ದಗಿ ಸಾವಿತ್ರಿ ಬಾಯಿ ಪುಲೆ ಹೇಳಿದ್ದಾರೆ, ಬಿಜೆಪಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ಗ ಸಾವಿತ್ರಿ ಬಾಯಿ ಪುಲೆ ಮೀಸಲಾತಿ ನೀಡುತ್ತಿಲ್ಲ ಎಂದು ಆರೋಪಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
