ಬೆಂಗಳೂರು
ವೇಗವಾಗಿ ಹೋಗುತ್ತಿದ್ದ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಹಿಂದಿನಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದು ಕಾರಿನ ಚಾಲಕ ಮೃತಪಟ್ಟಿರುವ ದಾರುಣ ಘಟನೆ ನೆಲಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಕಾರು ಚಾಲಕ ಸುರೇಶ್ ಕುಮಾರ್ ( 28) ಎಂದು ಗುರುತಿಸಲಾಗಿದೆ.ನೈಸ್‍ರಸ್ತೆಯ ಮಾದವರ ಟೋಲ್ ಕಡೆಗೆ ಕಂಟೈನರ್ ಲಾರಿ ವೇಗವಾಗಿ ಹೋಗುತ್ತಿದ್ದ ಲಾರಿ ಚಾಲಕ ಮಾರ್ಗಮಧ್ಯೆ ನವಿಲೆ ಲೇಔಟ್ ಬಳಿ ಏಕಾಏಕಿ ಬ್ರೇಕ್ ಹಾಕಿದ್ದಾನೆ.
ಹಿಂದಿನಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಕಾರಿನ ಚಾಲಕ ಸುರೇಶ್ ಕುಮಾರ್ ಗಂಭೀರ ಗಾಯಗೊಂಡಿದ್ದು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
