ಅಲ್ಪಸಂಖ್ಯಾತ ಸಮುದಾಯಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಧೀಮಂತ ವ್ಯಕ್ತಿ ದೇವರಾಜ ಅರಸು-ರಘುಮೂರ್ತಿ

ಚಳ್ಳಕೆರೆ

       ರಾಜ್ಯದ ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ಅಲೆಮಾರಿ ಮತ್ತು ಅಲಕ್ಷಿತ ಸಮುದಾಯಗಳ ಅಭಿವೃದ್ಧಿಗಾಗಿ ಶ್ರಮಿಸಿದ ಮೊಟ್ಟ ಮೊದಲ ವ್ಯಕ್ತಿ ದಿವಂಗತ ದೇವರಾಜ ಅರಸುರವರು. ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಅವರು ಈ ಎಲ್ಲಾ ವರ್ಗಗಳ ಸಮುದಾಯಗಳು ಸೌಲಭ್ಯ ವಂಚಿತರಾಗುತ್ತಿದ್ದು, ಈ ಸಮುದಾಯಗಳ ಶ್ರೇಯೋಭಿವೃದ್ಧಿಗಾಗಿ ವಿಶೇಷ ಸರ್ಕಾರಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಈ ವರ್ಗಗಳಿಗೆ ನ್ಯಾಯದೊರಕಿಸಿಕೊಡುವಲ್ಲಿ ಮುಂದಾಗಿದ್ದರೂ ಎಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ತಿಳಿಸಿದರು.

         ಅವರು, ಶನಿವಾರ ಇಲ್ಲಿನ ರೋಟರಿ ಬಾಲಭವನದಲ್ಲಿ ಕರ್ನಾಟಕ ರಾಜ್ಯ ಅಲಕ್ಷಿತ ಸಮುದಾಯಗಳ ಜಿಲ್ಲಾ ಮಹಾವೇದಿಕೆ ಮತ್ತು ಚಳ್ಳಕೆರೆ ತಾಲ್ಲೂಕು ಅಲಕ್ಷಿತ ವೇದಿಕೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಮುದಾಯಗಳು ಸಹ ಸಮಾಜದಲ್ಲಿ ಎಲ್ಲಾ ರೀತಿಯಿಂದಲೂ ಸಮಾನತೆಯ ಅವಕಾಶಗಳನ್ನು ಪಡೆಯಬೇಕಿದ್ದು, ಕಾರಣಾಂತರಗಳಿಂದ ಹಿಂದುಳಿದ್ದು, ಇವುಗಳ ಅಭ್ಯುದಯಕ್ಕಾಗಿ ಜಿಲ್ಲಾ ಮಟ್ಟದ ವೇದಿಕೆ ಸಿದ್ದವಾಗಿದ್ದು, ಮುಂಬರುವ ದಿನಗಳಲ್ಲಿ ಈ ವೇದಿಕೆ ಮೂಲಕ ಈ ಸಮುದಾಯಗಳು ಸರ್ಕಾರದ ಸೌಲಭ್ಯಗಳನ್ನು ಪಡೆದು ಪ್ರಗತಿಯತ್ತ ಸಾಗಲಿ ಎಂದು ಶುಭ ಹಾರೈಸಿದರು.

        ಪ್ರಾಸ್ತಾವಿಕವಾಗಿ ಮಾತನಾಡಿದ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಟಿ.ತಿಪ್ಪೇಸ್ವಾಮಿ ಸಂಪಿಗೆ, ಸರ್ಕಾರ ಹಾಗೂ ಚುನಾಯಿತ ಜನಪ್ರತಿನಿಧಿಗಳು ಈ ಸಮುದಾಯಗಳನ್ನು ನಿರ್ಲಕ್ಷ್ಯೆ ವಹಿಸಿದ ಹಿನ್ನೆಲೆಯಲ್ಲಿ ಈ ಸಮುದಾಯದ ಲಕ್ಷಾಂತರ ಜನರು ಸರ್ಕಾರದ ಸೌಲಭ್ಯಗಳಿಂದ ದೂರ ಉಳಿದಿದ್ದು, ಅವುಗಳ ಬಗ್ಗೆ ಮಾಹಿತಿಯನ್ನು ಪಡೆಯದೆ ತೊಂದರೆ ಅನುಭವಿಸುತ್ತಿದ್ಧಾರೆ. ಈ ಸಮುದಾಯಗಳನ್ನು ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ವೇದಿಕೆಯನ್ನು ನಿರ್ಮಿಸಲಾಗಿದೆ. ಎಲ್ಲರ ಸಹಕಾರದಿಂದ ವೇದಿಕೆ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವುದು ಎಂದರು.

          ಇದೇ ಸಂದರ್ಭದಲ್ಲಿ ಸಮುದಾಯದ ಎಸ್‍ಎಸ್‍ಎಲ್‍ಸಿ, ಪಿಯುಸಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವೇದಿಕೆ ವತಿಯಿಂದ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಕೊರಚ-ಕೊರಮ ಸಂಘದ ಅಧ್ಯಕ್ಷ ಕೆ.ಕೃಷ್ಣಪ್ಪ, ವಾಲ್ಮೀಕಿ ನಾಯಕ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಬಿ.ತಿಪ್ಪೇಸ್ವಾಮಿ, ನಗರಸಭಾ ಸದಸ್ಯರಾದ ಮಂಜುಳಾ ಪ್ರಸನ್ನಕುಮಾರ್, ಕೆ.ವೀರಭದ್ರಪ್ಪ, ಚಳ್ಳಕೆರೆಯಪ್ಪ, ಅಲಕ್ಷಿತ ವೇದಿಕೆ ಜಿಲ್ಲಾಧ್ಯಕ್ಷ ಹುಲಿಗಪ್ಪ, ಗಂಗಾಧರಪ್ಪ, ಎಲ್‍ಐಸಿ ರಂಗಸ್ವಾಮಿ, ಪ್ರತಾಪ್ ಜೋಗಿ ಪಿ.ರುದ್ರಮೂರ್ತಿ, ದೇವರಾಜ್, ಎಸ್.ಸುಧಾ, ತಾಲ್ಲೂಕು ಅಧ್ಯಕ್ಷ ಎ.ರಾಮಚಂದ್ರ, ಪಿ.ಬಷೀರ್ ಹಯಾತ್, ಪತ್ರಕರ್ತ ಕೊರ್ಲಕುಂಟೆ ತಿಪ್ಪೇಸ್ವಾಮಿ, ಬಿ.ಬಸವರಾಜು, ಎಸ್.ಉಮೇಶ್ ಮುಂತಾದವರು ಭಾಗವಹಿಸಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap