ತುರುವೇಕೆರೆ:
ಕೋಮುವಾದಿ ಪಕ್ಷವಾದ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ.ದೇವೇಗೌಡರಿಗೆ ಬೆಂಬಲ ನೀಡುತ್ತಿರುವುದಾಗಿ ಕಾಂಗ್ರೆಸ್ ಮುಖಂಡ ಎಂ.ಎನ್.ಗೋವಿಂದ್‍ರಾಜ್‍ಗೌಡ ತಿಳಿಸಿದರು.
ಪಟ್ಟಣದ ತಮ್ಮ ಕಚೇರಿಯಲ್ಲಿ ತಮ್ಮ ಬೆಂಬಲಿಗರ ಜೊತೆ ಪತ್ರಿಕಾ ಗೋಷ್ಟಿ ಉದ್ದೇಶಿಸಿ ಮಾತನಾಡುತ್ತಾ ಮಾಜಿ ಪ್ರದಾನಿ ಹೆಚ್.ಡಿ.ದೇವೇಗೌಡರು ನಮ್ಮ ಜಿಲ್ಲೆಯಲ್ಲಿ ಸ್ಪರ್ಧಿಸುತ್ತಿರುವುದೇ ನಮ್ಮೆಲ್ಲರ ಸೌಭಾಗ್ಯವಾಗಿದ್ದು ಅವರ ಗೆಲುವಿನಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯವೆಂದರು. ನಾವು ಮತ್ತು ನಮ್ಮ ಬೆಂಬಲಿಗರು ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿದ್ದು ತುರುವೇಕೆರೆ ವಿಧಾನಸಭಾ ಕ್ಷೇತ್ರದಿಂದ ಅತೀ ಹೆಚ್ಚು ಮತಗಳನ್ನು ದೇವೇಗೌಡರು ಪಡೆಯಲು ನಾವುಗಳು ಶ್ರಮಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಹೆಚ್.ಬಿ.ನಂಜೇಗೌಡ, ಪ.ಪಂ. ಸದಸ್ಯರುಗಳಾದ ಶಶಿಶೇಖರ್, ಯಜಮಾನ್‍ಮಹೇಶ್, ಶ್ರೀನಿವಾಸ್, ಮುಖಂಡರಾದ ನಾಗರಾಜು, ರಂಗನಾಥ್, ಶಿವರಾಜು, ಬೆಟ್ಟಸ್ವಾಮಿ, ಸ್ವರ್ಣಕುಮಾರ್, ದೇವರಾಜು ಸೇರಿದಂತೆ ಅಭಿಮಾನಿಗಳು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
