ಬಳ್ಳಾರಿ
ಸಂತಶ್ರೇಷ್ಠ ಕವಿ ಭಕ್ತ ಕನಕದಾಸ ಜಯಂತಿ ನಿಮಿತ್ತ ಅದ್ಧೂರಿ ಮೆರವಣಿಗೆ ಬುಧವಾರ ನಡೆಯಿತು.ನಗರದ ಅಗ್ನಿಶಾಮಕ ದಳದ ಕಚೇರಿ ಎದುರುಗಡೆ ಇರುವ ಭಕ್ತ ಕನಕದಾಸ ಪುತ್ಥಳಿಗೆ ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಚಾಲನೆ ನೀಡಿದರು.
ಕನಕದಾಸ ಪುತ್ಥಳಿಯಿಂದ ಆರಂಭವಾದ ಸಂತ ಶ್ರೇಷ್ಠ ಭಕ್ತ ಕನಕದಾಸರ ಬೃಹತ್ ಭಾವಚಿತ್ರದ ಮೆರವಣಿಗೆಯು ದುರ್ಗಮ್ಮ ಗುಡಿ ಮಾರ್ಗವಾಗಿ ಗಡಗಿ ಚನ್ನಪ್ಪ ವೃತ್ತದ ಮುಖಾಂತರ ಬೆಂಗಳೂರು ರಸ್ತೆ- ತೇರು ಬೀದಿ ಮಾರ್ಗವಾಗಿ ಎಚ್.ಆರ್.ಗವಿಯಪ್ಪ ವೃತ್ತದ ಮೂಲಕ ಜೋಳದರಾಶಿ ದೊಡ್ಡನಗೌಡ ರಂಗಮಂದಿರದರವರೆಗೆ ನಡೆಯಿತು. ವಿವಿಧ ಕಲಾತಂಡಗಳು ಮೆರವಣಿಗೆಗೆ ವಿಶೇಷ ಮೆರಗು ನೀಡಿದವು.
ಈ ಸಂದರ್ಭದಲ್ಲಿ ಶಾಸಕ ಜಿ.ಸೋಮಶೇಖರ ರೆಡ್ಡಿ, ಜಿಪಂ ಅಧ್ಯಕ್ಷೆ ಸಿ.ಭಾರತಿ ತಿಮ್ಮಾರೆಡ್ಡಿ, ಜಿಪಂ ಸಿಇಒ ಡಾ.ಕೆ.ವಿ.ರಾಜೇಂದ್ರ, ಎಸ್ಪಿ ಅರುಣ ರಂಗರಾಜನ್, ಮೇಯರ್ ಸುಶೀಲಾಬಾಯಿ, ಮಹಾನಗರ ಪಾಲಿಕೆ ಸದಸ್ಯರು ಸೇರಿದಂತೆ ಕುರುಬರ ಸಮಾಜದ ಮುಖಂಡರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ