ಆಂಗ್ಲ ಬೋಧನೆ ವಿರೋಧಿಸುವವರು ಎಲ್ಲಾ ಆಂಗ್ಲ ಮಾಧ್ಯಮ ಶಾಲೆಗಳನ್ನು ಮುಚ್ಚಿಸಲಿ: ರೇವಣ್ಣ

ಬೆಂಗಳೂರು

       ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಬೋಧನೆಯನ್ನು ವಿರೋಧಿಸುವವರು ರಾಜ್ಯದ ಎಲ್ಲಾ ಆಂಗ್ಲ ಮಾಧ್ಯಮ ಶಾಲೆಗಳ ಬಾಗಿಲು ಮುಚ್ಚಿಸಲಿ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಿಂದಲೇ ರಾಜ್ಯದಲ್ಲಿ ಸಾವಿರ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಆರಂಭಿಸಲು ಉತ್ಸುಕವಾಗಿರುವ ಸರ್ಕಾರ, ಸದ್ದಿಲ್ಲದೇ ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಆದೇಶ ನೀಡಿತ್ತು.

        ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಆಂಗ್ಲ ಮಾಧ್ಯಮ ಶಾಲೆ ಆರಂಭಿಸುವ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ವಿರೋಧಿಸಿದ್ದರು.

       ಈ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ರೇವಣ್ಣ, ಪರಮೇಶ್ವರ್, ಕುಮಾರಸ್ವಾಮಿ ಅಂತಹ ದೊಡ್ಡವರ ಮಕ್ಕಳು ಮಾತ್ರ ಇಂಗ್ಲಿಷ್ ಶಾಲೆಯಲ್ಲಿ ಓದಬೇಕಾ..? ಹೊಟ್ಟೆಗೆ ಹಿಟ್ಟಿಲ್ಲದವರ ಮಕ್ಕಳು ಇಂಗ್ಲಿಷ್ ಓದುವುದು ಬೇಡವಾ ಎಂದು ಪ್ರಶ್ನಿಸಿದರು.ಇಂಗ್ಲಿಷ್ ಮಾಧ್ಯಮ ಶಾಲೆಯನ್ನು ತೆಗೆದು ಎಲ್ಲರಿಗೂ ಕನ್ನಡ ಶಾಲೆ ಎಂಬ ನಿರ್ಣಯವನ್ನು ತರುವುದಾದರೆ ಅದಕ್ಕೆ ಪೂರ್ಣ ಬೆಂಬಲವಿದೆ. ಈ ಬಗ್ಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯಗೆ ಮನವಿ ಮಾಡುವುದಾಗಿ ರೇವಣ್ಣ ಹೇಳಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link