ಬೆಂಗಳೂರು
ಕಾರಂಜಾ ನೀರಾವರಿ ಯೋಜನೆಯ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿಯೊಂದಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಭೆ ನಡೆಸಿ, ಸಂತ್ರಸ್ತರ ನ್ಯಾಯಯುತ ಬೇಡಿಕೆಗಳನ್ನು ಬಗೆಹರಿಸುವುದಾಗಿ ವಾಗ್ದಾನ ನೀಡಿದ್ದಾರೆ.
ಸಭೆಯಲ್ಲಿ ಮಾತನಾಡಿದ ಅವರು, ಸಂತ್ರಸ್ತರ ಬೇಡಿಕೆಗಳನ್ನು ಮಾನವೀಯ ದೃಷ್ಠಿಯಿಂದ ಪರಿಶೀಲಿಸಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಪರಿಹಾರ ಕ್ರಮಗಳ ಬಗ್ಗೆ ಶೀಘ್ರದಲ್ಲಿಯೇ ಮತ್ತೊಂದು ಸಭೆ ನಡೆಸುವುದಾಗಿ ಸಹ ಮುಖ್ಯಮಂತ್ರಿ ತಿಳಿಸಿ, 60 ದಿನಗಳಿಂದ ನಡೆಸುತ್ತಿರುವ ಪ್ರತಿಭಟನೆಯನ್ನು ಕೈಬಿಡುವಂತೆ ಸಮಿತಿಗೆ ಮನವಿ ಮಾಡಿದರು.
ಸಭೆಯಲ್ಲಿ ಹಾಜರಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿ, ಕಾರಂಜ ನೀರಾವರಿ ಯೋಜನೆಯ ಮುಳುಗಡೆ ಸಂತ್ರಸ್ತರ ಬೇಡಿಕೆಗಳನ್ನು 2005ರಲ್ಲೇ ಸಚಿವ ಸಂಪುಟ ಸಭೆ ತಿರಸ್ಕರಿಸಿತ್ತು, ಆದಾಗ್ಯೂ ಈ ಬೇಡಿಕೆಗಳನ್ನು ಈಗ ಸಹಾನುಭೂತಿಯಿಂದ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








