ಬೆಂಗಳೂರು
ಕೊರೊನಾ ಏರಿಕೆಯಲ್ಲಿ ಭಾರತ ಇಡೀ ವಿಶ್ವದಲ್ಲಿ ಮೂರನೇ ಸ್ಥಾನಕ್ಕೇರಿದ್ದು, ಇದಕ್ಕೆಲ್ಲ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಗಂಟೆ ಬಾರಿಸಿ, ಚಪ್ಪಾಳೆ ತಟ್ಟಿ, ದೀಪ ಹಚ್ಚಿ ಎಂದು ಜನರನ್ನು ಭಾವನಾತ್ಮಕವಾಗಿ ಮೋಸಗೊಳಿಸಿದ್ದರ ಪರಿಣಾಮವೇ ಕಾರಣ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಇನ್ನು ಕೆಲವೇ ದಿನಗಳಲ್ಲಿ ವಿಶ್ವದಲ್ಲೇ ಮೊದಲನೇ ಸ್ಥಾನಕ್ಕೆ ಭಾರತ ಏರುವುದು ನಿಸ್ಸಂದೇಹವಾಗಿದ್ದು,ಬಿಜೆಪಿ ಘೋಷಿತ ‘ವಿಶ್ವಗುರು’ಗಳ ಬತ್ತಳಿಕೆಯಲ್ಲಿ ಕೊರೊನಾ ಸದ್ದಡಗಿಸಲು ಇನ್ಯಾವ ಅಸ್ತ್ರಗಳಿದ್ದಾವೋ? ಎಂದು ಲೇವಡಿ ಮಾಡುವ ಮೂಲಕ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.
ಜನಸಂಖ್ಯೆ ಹೆಚ್ಚಿರುವುದರಿಂದ ಕೊರೊನಾ ಏರಿರುವುದು ಆಶ್ಚರ್ಯಕರ ಸಂಗತಿ ಅಲ್ಲ. ಆದರೆ ನೆರೆ ರಾಷ್ಟ್ರಗಳಿಗೆ ಹೋಲಿಕೆ ಮಾಡಿದರೆ ಇದನ್ನು ನಿಯಂತ್ರಿಸುವಲ್ಲಿ ಕೇಂದ್ರದ ವೈಫಲ್ಯತೆ ಇರುವುದು ಸ್ಪಷ್ಟವಾಗುತ್ತದೆ. ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ, ಬರ್ಮಾ, ಶ್ರೀಲಂಕಾ, ಅಫಘಾನಿಸ್ತಾ, ಭೂತಾನ್, ಚೀನಾ ನಮಗಿಂತ ಉತ್ತಮ ಸ್ಥಿತಿಯಲ್ಲಿವೆ ಎಂದು ದಿನೇಶ್ ಗುಂಡೂರಾವ್ ಕುಟುಕಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ