ಶಿಕ್ಷಕ ಮಿತ್ರ ಆ್ಯಪ್ ಬಿಡುಗಡೆ ಮಾಡಿದ ಸಿಎಂ

  • ಬೆಂಗಳೂರು

    ಸಾರ್ವಜನಿಕ ಶಿಕ್ಷಣ ಇಲಾಖೆಯು, ಶಿಕ್ಷಕರ ಅನುಕೂಲಕ್ಕಾಗಿ ರೂಪಿಸಿರುವ ‘ಶಿಕ್ಷಕ ಮಿತ್ರ’ ಆ್ಯಪ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಬಿಡುಗಡೆ ಮಾಡಿದರು.ಇದೇ ಸಂದರ್ಭದಲ್ಲಿ ಸಚಿವ ಎಸ್. ಸುರೇಶ್ ಕುಮಾರ್ ಅವರನ್ನು ಕುರಿತ ವಿಮರ್ಶಾ ಬರಹಗಳ ‘ವಿದ್ಯಾವಿನೀತ’ ಸಂಕಲನ ಹಾಗೂ ಸುರೇಶ್ ಕುಮಾರ್ ಅವರ ಅಂಕಣಗಳ ಬರಹ ‘ಶಿಕ್ಷಣಯಾತ್ರೆ ‘ ಕೃತಿಗಳನ್ನು ಬಿಡುಗಡೆ ಮಾಡಿದರು.

    ಬಳಿಕ ಯಡಿಯೂರಪ್ಪ, ಶಿಕ್ಷಕ ಮಿತ್ರ ಆ?ಯಪ್ ನಿಂದ ಶಿಕ್ಷಕರು, ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಸಾಧ್ಯವಾಗಲಿದೆ. ಈ ಬಾರಿ ಸಾರ್ವಜನಿಕ ವರ್ಗಾವಣೆಗೆ ಈ ಆ?ಯಪ್ ಮೂಲಕವೇ ಮನವಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇದು ಶಿಕ್ಷಕರ ಸ್ನೇಹಿಯಾಗಿ ಕಾರ್ಯ ನಿರ್ವಹಿಸಲಿದ್ದು, ರಾಜ್ಯ ಸರ್ಕಾರ ಶಿಕ್ಷಕರ ವರ್ಗಾವಣೆ ನೀತಿಯನ್ನು ಸರಳೀಕರಣಗೊಳಿಸಿದೆ ಎಂದರು.

     ಕೋವಿಡ್ ಸಂಕಷ್ಟ ಪರಿಸ್ಥಿತಿಯಲ್ಲಿ ಎಸ್‍ಎಸ್‍ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ನಡೆಸಿದ್ದು, ಇದೊಂದು ಮಹತ್ವದ ಬೆಳವಣಿಗೆಯಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಕೈಗೊಂಡ ಗಮನಾರ್ಹ ಸುಧಾರಣೆಗಳ ಫಲವಾಗಿ ಹಲವಾರು ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗೆ ಸೇರಿಸಿದ್ದಾರೆ ಎಂದು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link