ಬೆಂಗಳೂರು
ಲೋಕಸಭಾ ಚುನಾವಣೆ ನೀತಿಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ರೈತರ ಸಾಲ ಮನ್ನಾ ಯೋಜನೆಯ ಹಣ ಬಿಡುಗಡೆಗೆ ತಡೆ ನೀಡಿದ್ದ ಚುನಾವಣಾ ಆಯೋಗ ಇದೀಗ ತನ್ನ ನಿಲುವನ್ನು ಸಡಲಿಸಿದೆ. ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟಣೆಗೂ ಮುನ್ನ ಸಹಕಾರ ಇಲಾಖೆ ಗುರುತಿಸಿದ್ದ ಅರ್ಹ ರೈತರ ಸಾಲಮನ್ನಾ ಮೊತ್ತವನ್ನು ಬಿಡುಗಡೆ ಮಾಡಲು ಚುನಾವಣಾ ಆಯೋಗ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ.
ಆಯೋಗದ ನಿರ್ದೇಶನದಂತೆ ಸಾಲಮನ್ನಾ ಹಣವನ್ನು ಮಾರ್ಚ್ 11ರಿಂದ ಸಹಕಾರ ಇಲಾಖೆ ಸ್ಥಗಿತಗೊಳಿಸಿತ್ತು. ಇದೀಗ, ರಾಜ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಗುರುತಿಸಲಾಗಿರುವ ಅರ್ಹ ಫಲಾನುಭವಿ ರೈತರ ಸಾಲ ಮನ್ನಾ ಹಣ ಬಿಡುಗಡೆ ಮಾಡಲು ಆಯೋಗ ಸೂಚಿಸಿದೆ ಎಂದು ಸಹಕಾರ ಇಲಾಖೆ ಮೂಲಗಳು ತಿಳಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
