ಅಂಬಿ ಅಂತ್ಯ ಸಂಸ್ಕಾರದ ಸಾರಥ್ಯ ವಹಿಸಿದ ಸಿಎಂ

ಬೆಂಗಳೂರು

      ಹಿರಿಯ ನಟ, ಮಾಜಿ ಸಚಿವ ಅಂಬರೀಷ್ ಅವರ ನಿಧನದ ನಂತರದಿಂದ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರದವರೆಗೆ ಸ್ವತಃ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರೇ ಸಾರಥ್ಯ ವಹಿಸಿದ್ದರು.

       ಮಂಡ್ಯ ಜಿಲ್ಲೆಯ ಜನರ ಒತ್ತಾಸೆಯಂತೆ ಅಂಬರೀಷ್ ಅವರ ಪಾರ್ಥಿವ ಶರೀರವನ್ನು ವಾಯುಪಡೆಯ ಹೆಲಿಕಾಪ್ಟರ್ ಮೂಲಕ ಮಂಡ್ಯ ಜಿಲ್ಲೆಗೆ ಕೊಂಡೊಯ್ದು, ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆಯ ಮಾಡಿ ಮತ್ತೆ ವಾಪಸ್ ತರಲು ಕುಮಾರ ಸ್ವಾಮಿ ಸೂಕ್ತ ವ್ಯವಸ್ಥೆ ಮಾಡಿದ್ದರು.

       ಅಲ್ಲಿಂದ ನೇರವಾಗಿ ಕಂಠೀರವ ಸ್ಟುಡಿಯೋಕ್ಕೆ ತೆರಳಿ ತಾವೇ ಮುಂದೆ ನಿಂತು ಅಂಬರೀಷ್ ಅವರ ಅಂತ್ಯಕ್ರಿಯೆ ಉಸ್ತುವಾರಿ ನೋಡಿಕೊಂಡರು.

        ಅಂತ್ಯಕ್ರಿಯೆಗೆ ಆಗಮಿಸಿದ ರಾಜಕೀಯ ಧುರೀಣರು ಹಾಗೂ ಚಿತ್ರರಂಗದ ಗಣ್ಯರನ್ನು ಖುದ್ದು ಬರಮಾಡಿಕೊಂದು ಮಾತನಾಡಿಸಿದರು. ಅಂತ್ಯಕ್ರಿಯೆ ಪೂರ್ಣಗೊಳ್ಳುವ ವರೆಗೂ ಸ್ಥಳದಲ್ಲಿಯೇ ಇದ್ದು ಕುಟುಂಬದವರಿಗೆ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು. ಪೊಲೀಸ್ ಆಯಕ್ತರು ಮತ್ತಿತರ ಅಧಿಕಾರಿಗಳಿಗೆ ಮುಖ್ಯಮಂತ್ರಿ ಅವರು ಆಗಾಗ್ಗೆ ಅಗತ್ಯ ಸೂಚನೆಗಳನ್ನು ನೀಡಿ ಶಾಂತಿಯುತವಾಗಿ ಅಂತ್ಯ ಸಂಸ್ಕಾರ ನೆರವೇರಲು ಸಹಕರಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link