ನವದೆಹಲಿ:
ಕೊರೋನಾ ವೈರಸ್ ಇಡೀ ವಿಶ್ವವನ್ನೇ ನಡುಗಿ ಹೋಗುವಂತೆ ಮಾಡಿದ್ದು, ಆರ್ಥಿಕ ಪರಿಸ್ಥಿತಿಯನ್ನು ಬುಡಮೇಲು ಮಾಡಿದೆ. ಭಾರತದಲ್ಲಿ ಪ್ರತೀನಿತ್ಯ ಸರಾಸರಿ 90 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿದ್ದು, ಸಾವಿನ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಈ ನಡುವೆ ಲಸಿಕೆ ಕಂಡು ಹಿಡಿಯಲು ಸಂಶೋಧನೆಗಳೂ ಕೂಡ ತೀವ್ರಗೊಂಡಿದ್ದು, ಬಹುತೇಕ ರಾಷ್ಟ್ರಗಳು ಸತತ ಯತ್ನಗಳನ್ನು ನಡೆಸುತ್ತಿದ್ದು, ಇದೇ ವೇಳೆ ಭಾರತದಲ್ಲಿ ಲಸಿಕೆ ಬಿಡುಗಡೆ ಕುರಿತು ಕೇಂದ್ರ ಸರ್ಕಾರ ಮಹತ್ವದ ಸುಳಿವು ನೀಡಿದೆ.
ಈಗಾಗಲೇ ದೇಶದಲ್ಲಿ ಕೊರೋನಾ ಸೋಂಕು ಸಂಖ್ಯೆ 51 ಲಕ್ಷ ಗಡಿದಾಟಿದ್ದುಸ ಸಾವಿನ ಸಂಖ್ಯೆ ಕೂಡ 83 ಸಾವಿರ ಗಡಿ ದಾಟಿದೆ. ಕೊರೋನಾ ಪರಿಸ್ಥಿತಿ ದಿನದಿಂದ ದಿನಕ್ಕೆ ತೀವ್ರವಾಗಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ದೇಶದ ಜನತೆ ಇದೀಗ ಲಸಿಕೆಗಾಗಿ ಎದುರು ನೋಡುತ್ತಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಆರೋಗ್ಯ ಸಚಿವ ರಾಜ್ಯಸಭೆಯಲ್ಲಿ ದೇಶದ ಕೊರೋನಾ ಪರಿಸ್ಥಿತಿ ಕುರಿತಂತೆ ಪ್ರತಿಕ್ರಿಯೆ ನೀಡಿದ್ದು, ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ