ಬೆಂಗಳೂರು
ಸಿದ್ದಗಂಗಾ ಶ್ರೀಗಳ ಆರೋಗ್ಯದ ಬಗ್ಗೆ ಜನರಿಗೆ ಆತಂಕ ಬೇಡ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ .ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾಂಬೆ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಶ್ರೀಗಳ ಆರೋಗ್ಯದಲ್ಲಿ ಸಣ್ಣ ಮಟ್ಟದ ಏರುಪೇರುಗಳಿವೆ.ಅವರ ಆರೋಗ್ಯ ಸಂಬಂಧ ಎಲ್ಲಾ ಮಾಹಿತಿ ತರಿಸಿಕೊಳ್ಳುತ್ತಿದ್ದೇನೆ ಎಂದರು.
ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ.ಹೆಚ್ಚಿನ ಚಿಕಿತ್ಸೆಗೆ ಚೆನ್ನೈ ಆಸ್ಪತ್ರೆಗೆ ಕರೆದುಕೊಂಡು ಹೋಗಲು ತೀರ್ಮಾನ ಮಾಡಲಾಗಿದೆ.ನಾನು ನಿನ್ನೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ.ಹಲವಾರು ವೈದ್ಯರು ಹಾಗೂ ತಜ್ಞರ ತಂಡದಿಂದ ಸ್ವಾಮೀಜಿಗೆ ಚಿಕಿತ್ಸೆ ನೀಡಲಾಗಿದೆ.ಸರ್ಕಾರ ಆಸ್ಪತ್ರೆಯ ವೆಚ್ಚವನ್ನು ಭರಿಸಲಿದೆ. ರಾಜ್ಯದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸರಿಗೆ ಎಲ್ಲಾ ರೀತಿಯ ಸಹಕಾರಕ್ಕೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ