ಗುಡಿಸಲಿಗೆ ಆಕಸ್ಮಿಕ ಬೆಂಕಿ : ವೃದ್ಧೆ ಸಜೀವ ದಹನ..!!!

ಗದಗ:

        ತೋಟದಲ್ಲಿದ್ದ ಗುಡಿಸಲು ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆದ ಕಾರಣ ಬೆಂಕಿ ತಗುಲಿ,ಓರ್ವ ವೃದ್ಧೆ ಹಾಗೂ 5 ಕುರಿಗಳು ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ನಾಗೇಂದ್ರಗಡ ಗ್ರಾಮದಲ್ಲಿ ವರದಿಯಾಗಿದೆ.

       70 ವರ್ಷದ ಹನುಮವ್ವ ಹಂಡಿ ಹಾಗೂ 5 ಕುರಿಗಳು ಸಜೀವ ದಹನವಾದ ದುರ್ದೈವಿಗಳು. ಗುಡಿಸಲಿನ ಮೇಲ್ಭಾಗದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿ ತಾಗಿದ್ದರಿಂದ ಗುಡಿಸಲು ಮನೆಗೆ ಬೆಂಕಿ ತಗುಲಿದೆ ಎಂದು ತಿಳಿದು ಬಂದಿದೆ , ರಾತ್ರಿ ವೇಳೆ ತೋಟದ ಮನೆಯಲ್ಲಿ ಯಾರು ಇಲ್ಲದ ವೇಳೆ ಘಟನೆ ಸಂಭವಿಸಿದೆ. ಪರಿಣಾಮ ವೃದ್ಧೆ ಸೇರಿದಂತೆ 5 ಕುರಿಗಳು ಹೊರಬರಲಾರದೆ ಸಜೀವ ದಹನವಾಗಿವೆ.

          ಗುಡಿಸಲಿಗೆ ಸಂಪೂರ್ಣ ಬೆಂಕಿ ಆವರಿಸಿಕೊಂಡಿದ್ದು, ಹಣ, ಬಟ್ಟೆ, ಗೃಹೋಪಯೋಗಿ ವಸ್ತುಗಳು ಹಾಗೂ ಕೃಷಿ ಸಲಕರಣೆಗಳು ಸಹ ಸುಟ್ಟು ಭಸ್ಮವಾಗಿವೆ. ಈ ವಿಚಾರ ಸ್ಥಳೀಯರಿಗೆ ತಿಳಿದ ತಕ್ಷಣ ಅಗ್ನಿಶಾಮಕ ದಳದವರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.

           ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕದಳ ಬಂದು  ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸಿದ್ದಾರೆ. ನಂತರ ಸ್ಥಳಕ್ಕೆ ಗಜೇಂದ್ರಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ ಇತ್ತ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ ೆಂದು ವರದಿಯಾಗಿದೆ .

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link