ಬಳ್ಳಾರಿ
ನಗರದ ತಾಲೂಕು ಕಚೇರಿ ಆವರಣದಲ್ಲಿರುವ ಗ್ರಾಮೀಣ ಪೊಲೀಸ್ ಠಾಣೆಯ ಆವರಣದಲ್ಲಿ ದ್ವಿಚಕ್ರ ವಾಹನದ ಹೆಲ್ಮೆಟ್ ಜಾಗೃತಿಗೆ ಶುಕ್ರವಾರರಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಕೋಳೂರು ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಸಾರ್ವಜನಿಕರು ದ್ವಿಚಕ್ರವಾಹನ ಚಾಲನೆ ಮಾಡುವಾಗ ಹೆಲ್ಮೆಟ್ ಧರಿಸಿ, ಸಂಚಾರಿ ನಿಯಮಗಳನ್ನು ಪಾಲಿಸಬೇಕು. ಇದರಿಂದ ಪ್ರತ್ಯೇಕ್ಷ ಹಾಗೂ ಪರೋಕ್ಷವಾಗಿ ಅಪಘಾತ ಹಾಗೂ ಅನಾಹುತಗಳನ್ನು ತಪ್ಪಿಸಬಹುದು. ದ್ವಿಚಕ್ರವಾಹನ ಪರವಾನಿಗೆ ಪಡೆದು ವಾಹನವನ್ನು ಚಲಾಯಿಸಬೇಕು ಎಂದರು.
“ಹೆಲ್ಮಟ್ ಧರಿಸಿ ಜೀವ ಉಳಿಸಿ”, “ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಸದಿರಿ”, “ಸಂಚಾರಿ ನಿಯಮ ಪಾಲಿಸಿ” ಎಂಬ ನಾಮಫಲಕಗಳನ್ನು ಹಿಡಿದು ನಗರದ ವಿವಿಧ ರಸ್ತೆಗಳಲ್ಲಿ ದ್ವಿಚಕ್ರ ವಾಹನದ ಮೂಲಕ ಜಾಗೃತಿ ಮೂಡಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಹಾಗೂ ಇತರರು ಇದ್ದರು.