ಹಾವೇರಿ:
ವಿದ್ಯಾರ್ಥಿ ದೆಸೆಯಿಂದಲೇ ನಾಯಕತ್ವ ಗುಣ ರೂಢಿಸಿಕೊಳ್ಳುವುದು ಹಾಗೂ ಸಂಸತ್‍ನಲ್ಲಿ ನಡೆಯುವ ಕಾರ್ಯಕಲಾಪ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಯುವ ಅಣಕು ಸಂಸತ್ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಸಿ.ಪೀರಜಾದೆ ತಿಳಿಸಿದರು.
ನಗರದ ಎಸ್.ಎಂ.ಎಸ್. ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಪಿಯು ಶಿಕ್ಷ ಣ ಇಲಾಖೆ ಹಾಗೂ ಸಂಸದೀಯ ವ್ಯವಹಾರಗಳ ಇಲಾಖೆ ನಡೆದ ಜಿಲ್ಲಾ ಮಟ್ಟದ ಯುವ ಅಣಕು ಸಂಸತ್ ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನ ವಹಿಸಿ ಮಾತನಾಡಿದ ಅವರು ಪದವಿ ಪೂರ್ವ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು 18 ವರ್ಷಗಳನ್ನು ಪೂರ್ಣ ಮಾಡಿ ನವ ಮತದಾರರಾಗಿ ನೋಂದಾಯಿಸಿಕೊಂಡಿರುತ್ತಾರೆ. ಇಂಥ ಸಂದರ್ಭದಲ್ಲಿ ದೇಶದ ಸಂಸತ್, ರಾಜ್ಯದ ವಿಧಾನಸಭೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ನಡೆಯುವ ವಿಚಾರಗಳ ಬಗ್ಗೆ ತಿಳಿವಳಿಕೆ ಮೂಡಿಸಿದಾಗ ಈ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸಮಾಜ ಸೇವೆ ಹಾಗೂ ದೇಶ ಸೇವೆ ಮಾಡಬೇಕು ಎಂಬ ಹುಮ್ಮಸ್ಸು ಬರುತ್ತದೆ.
ಆ ನಿಟ್ಟಿನಲ್ಲಿ ಕಾರ್ಯಕ್ರಮ ಹೆಚ್ಚು ಪ್ರಸ್ತುತ. ವಿದ್ಯಾರ್ಥಿಗಳು ತಾವು ವಹಿಸಿಕೊಂಡ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ರ್ವಹಿಸಿದರೆ ಬಹುಮಾನ ಹಾಗೂ ಪ್ರಶಂಸಾ ಪತ್ರ ನೀಡಲಾಗುವುದು ಎಂದರು.ನಂತರ ಕಾರ್ಯಕ್ರಮವನ್ನು ಉದ್ಟಾಟಿಸಿದ ಜಿಲ್ಲಾ ಪಂಚಾಯತಿ ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ ಮಾತನಾಡಿ, ಈಚಿನ ದಿನಗಳಲ್ಲಿ ರಾಜಕೀಯ ಕ್ಷೇತ್ರದ ಬಗ್ಗೆ ಜನರಲ್ಲಿ ಬೇಸರ ತರುವಂತಹ ವಿಚಾರಗಳು ಹೆಚ್ಚು ಚರ್ಚೆಯಾಗುತ್ತಿವೆ. ಇದರ ಹೊರತಾಗಿ ದೇಶದ ಅಭಿವೃದ್ಧಿಯಲ್ಲಿ ಯುವಜನಾಂಗ ರಾಜಕೀಯ ಕ್ಷೇತ್ರದಲ್ಲಿ ಪ್ರಾಮಾಣಿಕತೆಯಿಂದ ತೊಡಗಿಸಿಕೊಳ್ಳಬೇಕು. ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡು ನಾಯಕತ್ವದ ಗುಣವನ್ನು ರೂಢಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಮಕ್ಕಳು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಮತ್ತು ಮಕ್ಕಳು ಒಳ್ಳೆಯ ನಾಗರಿಕರಾಗಿ ಬೆಳೆವಣಿಗೆಯಾಗಬೇಕಾದರೆ ಮಕ್ಕಳದೆಯಾದ ಅಣಕು ಸಂಸತ್ತು ನಡೆಸುವುದು ಅನಿವಾರ್ಯವಿದೆ ಎಂದು ಕಾಲೇಜಿನ ಪ್ರಾಚಾರ್ಯರಾದ ಎಸ್.ಎಚ್.ಕಬ್ಬಿಣಕಂತಿಮಠ ಹೇಳಿದರು. ಆದರ್ಶ ಶಿಕ್ಷಣ ಸಮಿತಿಯ ಗೌರವ ಕಾರ್ಯದರ್ಶಿಗಳಾದ ಎಸ್.ವ್ಹಿ.ತುಪ್ಪದ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಸುಮಾರು 2 ಗಂಟೆಗೂ ಹೆಚ್ಚು ಕಾಲ ದೇಶದ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು. ವಿಡಂಬಣೆ, ಪ್ರತಿಭಟನೆ, ಹಾಸ್ಯ ಹಾಗೂ ಸಭೆಯ ಗೌರವಕ್ಕೆ ಧಕ್ಕೆ ತಂದ ಸಂಸತ್ ಸದಸ್ಯರನ್ನು ಸ್ವೀಕರ್ ಅವರ ಆದೇಶದ ಮೇರೆಗೆ ಮಾರ್ಷಲ್‍ಗಳ ಮೂಲಕ ಹೊರ ಹಾಕಿಸಿದ ಪ್ರಸಂಗವನ್ನು ಕಾರ್ಯಕ್ರಮದಲ್ಲಿ ಪ್ರದರ್ಶಿಸಿದರು.
ಈ ಯುವ ಸಂಸತ್ತಿನ ಕುರಿತು ಪ್ರಾಸ್ತವಿಕವಾಗಿ ಬಿ.ಎಂ.ಕಾಡಪ್ಪನವರ ಅವರು ಯುವ ಸಂಸತ್ತಿನ ಮಹತ್ವ, ಅದರ ಉದ್ದೇಶಗಳ ಬಗ್ಗೆ ಹೇಳಿದರು. ಕುಮಾರಿ ಕಲ್ಲೇದೇವರ ಹಾಗೂ ಸಂಗಡಿಗರು ಪ್ರಾರ್ಥನೆ ಗೀತೆ ಹೇಳಿದರು. ಪಿ.ಐ.ಗಚ್ಚಿನಮನಿಯವರು ಎಲ್ಲರನ್ನು ಸ್ವಾಗತಿಸಿದರು. ಕೆ.ಎಚ್.ಸಿದ್ದಣ್ಣನವರ ವಂದನಾರ್ಪಣೆ ಮಾಡಿದರು. ಕುಮಾರಿ ಪೂಜಾ ಹಿರೇಮಠ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ