ಖಾದಿ ಉತ್ಸವ-2019

ಬೆಂಗಳೂರು

        ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, “ಖಾದಿ ಉತ್ಸವ-2019” ರಾಷ್ಟ್ರಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಮ್ಮಿಕೊಂಡಿದೆ. ನಗರದ ಸ್ವಾತಂತ್ರ ಉದ್ಯಾನವನದಲ್ಲಿ ಜನವರಿ 2 ರಿಂದ 31 ರವರೆಗೆ ವಸ್ತು ಪ್ರದರ್ಶನ ನಡೆಸಲಾಗುತ್ತಿದೆ ಎಂದು ಸಣ್ಣ ಕೈಗಾರಿಕಾ ಸಚಿವ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಗುಬ್ಬಿ ಶ್ರೀನಿವಾಸ್ ತಿಳಿಸಿದ್ದಾರೆ.

        ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಜ.2 ರಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಸ್ತು ಪ್ರದರ್ಶನಕ್ಕೆ ಉದ್ಘಾಟನೆ ನೆರವೇರಿಸಲಿದ್ದಾರೆ. ಒಂದು ತಿಂಗಳು ಕಾಲ ನಡೆಯುವ ವಸ್ತುಪ್ರದರ್ಶನದಲ್ಲಿ ರಾಜ್ಯ ಸೇರಿದಂತೆ ದೇಶದ ವಿವಿಧ ಭಾಗಗಳ ಕಲಾವಿದರು ತಯಾರಿಸಿದ ವಸ್ತುಗಳು ಪ್ರದರ್ಶನಗೊಳ್ಳಲಿವೆ. ಗುಡಿ ಕೈಗಾರಿಕೆಗಳನ್ನು, ಖಾದಿ ಉತ್ಪನ್ನಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.

        ಇದೇ ವೇಳೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ?ಅವರು, ಅಕ್ರಮ ಮರಳುಗಾರಿಕೆಯನ್ನು ತಡೆಯುವಲ್ಲಿ ತಾವು ಸಫಲರಾಗಿದ್ದನ್ನು ಸಹಿಸಿಕೊಳ್ಳದ ಶಾಸಕ ರೇಣುಕಾಚಾರ್ಯ ತಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ತನ್ನ ಅವಧಿಯಲ್ಲಿ ಮರಳು ನೀತಿ ವಿರುದ್ಧ ಕಾಯಿದೆ ತರುವುದಾಗಿ ಹೇಳಿತ್ತಾದರೂ ಅದನ್ನು ಸಾಧ್ಯಮಾಡಲಿಲ್ಲ. ಅಕ್ರಮ ಮರಳುಗಣಿಗಾರಿಕೆಯನ್ನು ತಾವು ಕಟ್ಟುನಿಟ್ಟಾಗಿ ಪಾಲಿಸುತ್ತಿರುವುದು ಬಿಜೆಪಿಯವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ ಎಂದರು.
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಜೊತೆ ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡಿದ ಅವರು, ಪಕ್ಷದ ನಾಯಕರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ ಎಂದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap