ತುರುವೇಕೆರೆ:
ಸರ್ಕಾರದ ವಿವಿಧ ಸವಲತ್ತುಗಳು ಪಡೆಯಲು ಹಾಗೂ ತಮ್ಮ ಹಕ್ಕುಗಳನ್ನು ಪ್ರತಿಪಾದಿಸಲು ಬೀದಿಬದಿ ವ್ಯಾಪಾರಿಗಳು ಸಂಘಟಿತರಾಗಬೇಗಬೇಕು ಎಂದು ಜಿಲ್ಲಾಧ್ಯಕ್ಷ ಭದ್ರೇಗೌಡ ತಿಳಿಸಿದರು.
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೀದಿಬದಿ ವ್ಯಾಪಾರಿಗಳ ನೂತನ ಪದಾದಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಬೀದಿವ್ಯಾಪಾರಿಗಳ ರಕ್ಷಣೆಗೆ ಹತ್ತು ಹಲವು ಕಾನೂನುಗಳು ರೂಪಿತಗೊಂಡಿವೆ. ಈ ಕಾನೂನುಗಳನ್ನು ಅರಿಯುವ ಮೂಲಕ ತಮ್ಮ ಆರ್ಥಿಕ ಸ್ಥಿತಿ ಉತ್ತಮಗೊಳಿಸಿಕೊಳ್ಳಬೇಕಿದೆ. ಸ್ಥಳೀಯ ಅಧಿಕಾರಿಗಳೊಂದಿಗೆ ಉತ್ತಮ ಭಾಂದವ್ಯ ರೂಪಿಸಿಕೊಳ್ಳುವ ಮೂಲಕ ತಮ್ಮ ವ್ಯವಹಾರಿಕಸ್ಥಿತಿಯನ್ನು ಮತ್ತಷ್ಟು ಉತ್ತಮಗೊಳಿಸಿಕೊಳ್ಳಬೇಕು. ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದಕ್ಕೆ ಬೀದಿಬದಿ ವ್ಯಾಪಾರಿಗಳು ಆದ್ಯತೆ ನೀಡಬೇಕು ಎಂದರು.
ನೂತನ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಮಾರುತಿ ಮಾತನಾಡಿ ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡುವ ಮೂಲಕ ಹೊಸ ಜವಾಬ್ದಾರಿಯನ್ನು ನೀಡಿದ್ದೀರಿ, ನನ್ನ ಆಯ್ಕೆಗೆ ಕಾರಣೀಭೂತರಾದ ಎಲ್ಲರಿಗೂ ನಾನು ಆಭಾರಿಯಾಗಿರುತ್ತೇನೆ. ಸಂಘದ ಪದಾದಿಕಾರಿಗಳ ಸಲಹೆ ಸೂಚನೆ ಮೇರೆಗೆ ಬೀದಬದಿ ವ್ಯಾಪಾರಿಗಳ ಕಲ್ಯಾಣಕ್ಕಾಗಿ ಶ್ರಮಿಸುತ್ತೇನೆ.ಈ ಸಂದರ್ಭದಲ್ಲಿ ಗೌರವಾದ್ಯಕ್ಷ ಎಂ.ಎಂ.ಕುಮಾರ್, ಉಪಾದ್ಯಕ್ಷ ನರಸಿಂಹಮೂರ್ತಿ,ನೂರುಲ್ಲಾ, ಬಸವರಾಜು,ಖಜಾಂಚಿ ರಮೇಶ್ ಸೇರಿದಂತೆ ವಿವಿಧ ಪದಾದಿಕಾರಿಗಳು, ಸದಸ್ಯರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ