ಚಿತ್ರದುರ್ಗ:
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ಹಿರಿಯೂರು ತಾಲೂಕು ಧರ್ಮಪುರ ಹೋಬಳಿ ಶ್ರವಣಗೆರೆ ಗ್ರಾಮದ ಎಸ್.ಆರ್.ತಿಪ್ಪೇಸ್ವಾಮಿರವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮಿನಾರಾಯಣರವರ ಆದೇಶದಂತೆ ರಾಜ್ಯ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಎಸ್.ಆರ್.ತಿಪ್ಪೇಸ್ವಾಮಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಫಾತ್ಯರಾಜನ್ ನೇಮಕಾತಿ ಆದೇಶ ಪತ್ರ ನೀಡಿ ಅಭಿನಂದಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಾಗರಾಜ್‍ಜಾನ್ಹವಿ, ರೆಹಮಾನ್, ಆಜಾಂ, ನಾಸಿರುದ್ದಿನ್, ಕಾರ್ಯದರ್ಶಿ ಎಸ್.ಟಿ.ಕೃಷ್ಣಮೂರ್ತಿ, ಕಾಂಗ್ರೆಸ್ ಮುಖಂಡ ಜಿ.ಕೃಷ್ಣಮೂರ್ತಿ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
