ಹಾವೇರಿ
ಆಹಾರ ಮತ್ತು ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳು, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಹಾಗೂ ಹಜ್ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರ ಜಿಲ್ಲಾ ಮಟ್ಟದ ಸಂಪರ್ಕ ಕಚೇರಿಯನ್ನು ಗುರುವಾರ ಜಿಲ್ಲಾಡಳಿತ ಭವನದ ಎ ಬ್ಲಾಕ್‍ನಲ್ಲಿ ಅಧೀಕೃತವಾಗಿ ಚಾಲನೆ ನೀಡಲಾಯಿತು.
ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರು ನೂತನ ಕಾರ್ಯಾಲಯವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿ.ಪಂ.ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ, ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ, ಮಾಜಿ ಸಚಿವರಾದ ರುದ್ರಪ್ಪ ಲಮಾಣಿ ಇತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ