ಮಧುಗಿರಿ
2019 ಜ. 1 ಕ್ಕೆ 18 ವರ್ಷ ತುಂಬುವ ಪ್ರತಿಯೊಬ್ಬರು ಸಹ ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗಾಗಿ ನಮೂನೆ 6 ರಲ್ಲಿ ಬಣ್ಣದ ಭಾವಚಿತ್ರ ಹಾಗೂ ಸೂಕ್ತ ದಾಖಲೆಗಳೊಂದಿಗೆ ತಮ್ಮ ಹತ್ತಿರದ ಬಿಎಲ್ಓ ಗಳನ್ನು ಸಂಪರ್ಕಿಸ ಬಹುದಾಗಿದೆ. ಮತದಾರ ಪಟ್ಟಿಯಲ್ಲಿ ತಮ್ಮ ಹೆಸರು ಕೈ ಬಿಟ್ಟಿದ್ದರೆ ನಮೂನೆ 7 ರಲ್ಲಿ ಹಾಗೂ ಮತದಾರರ ಪಟ್ಟಿಯಲ್ಲಿ ಭಾವಚಿತ್ರ ಇಲ್ಲದವರು ನಮೂನೆ 8 ರಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ನ.20 ರೊಳಗೆ ನೀಡಲು ಕೊನೆಯ ದಿನಾಂಕವಾಗಿದೆ ಎಂದು ಪ್ರಭಾರ ತಹಸೀಲ್ದಾರ್ ತಿಪ್ಪೇಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.